No menu items!
27.4 C
Munich
Saturday, June 20, 2026

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ: ಬೆಂಗಳೂರಿನಲ್ಲಿ ವಾರಾಂತ್ಯ ಕೂಲ್ ಕೂಲ್ ವಾತಾವರಣ

Must read

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ: ಬೆಂಗಳೂರಿನಲ್ಲಿ ವಾರಾಂತ್ಯ ಕೂಲ್ ಕೂಲ್ ವಾತಾವರಣ

ಬೆಂಗಳೂರು: ನೈಋತ್ಯ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿದಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಇಂದು ವಾರಾಂತ್ಯದ ದಿನ ತಂಪಾದ ಹವಾಮಾನ ಕಂಡುಬರುವ ಸಾಧ್ಯತೆ ಇದೆ. ನಗರದ ಹಲವು ಪ್ರದೇಶಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರು ನಗರದಲ್ಲಿ ಇಂದು ಗರಿಷ್ಠ ತಾಪಮಾನ 29 ರಿಂದ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ರಿಂದ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ. ದಿನವಿಡೀ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ನಾಗರಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಪಶ್ಚಿಮ ದಿಕ್ಕಿನಿಂದ ಗಂಟೆಗೆ 15 ರಿಂದ 25 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಕೆಲವೊಮ್ಮೆ ಗಾಳಿಯ ವೇಗ 40 ಕಿಲೋಮೀಟರ್ವರೆಗೆ ತಲುಪಬಹುದು. ಎಂ.ಜಿ. ರಸ್ತೆ, ವೈಟ್ಫೀಲ್ಡ್, ಎಲೆಕ್ಟ್ರಾನಿಕ್ ಸಿಟಿ, ಜಯನಗರ, ಯಶವಂತಪುರ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಸಮುದ್ರ ತೀರ ಪ್ರದೇಶಗಳಲ್ಲಿ ಗಾಳಿಯ ವೇಗ ಹೆಚ್ಚಾಗಲಿದ್ದು, ಜೂನ್ 21ರಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.
ಇನ್ನು ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಒಣ ಹವಾಮಾನ ಇರಲಿದ್ದು, ಕೆಲವೆಡೆ ಹಗುರ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಸೆಖೆಯ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.
ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಮತ್ತು ಮಳೆಯ ಸಾಧ್ಯತೆ ಇರುವುದರಿಂದ ರೈತರು ಹಾಗೂ ಸಾರ್ವಜನಿಕರು ಹವಾಮಾನ ಇಲಾಖೆಯ ಮುನ್ಸೂಚನೆಗಳತ್ತ ಗಮನಹರಿಸುವಂತೆ ಸೂಚಿಸಲಾಗಿದೆ.

- Advertisement -spot_img

More articles

- Advertisement -spot_img

Latest article