No menu items!
18.3 C
Munich
Sunday, August 2, 2026

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆಯಿಂದ ಎಚ್ಚರಿಕೆ

Must read

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆಯಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಎಚ್ಚರಿಕೆಯಿಂದಿರಲು ಸೂಚಿಸಿದೆ.
ಹವಾಮಾನ ಇಲಾಖೆಯ ಪ್ರಕಾರ, ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ಮತ್ತು ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಬಿರುಗಾಳಿಯ ವೇಗವೂ ಹೆಚ್ಚಾಗುವ ನಿರೀಕ್ಷೆಯಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.
ಇನ್ನು ಬೆಂಗಳೂರು, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಇದೇ ವೇಳೆ, ಜುಲೈ 11ರಿಂದ ರಾಜ್ಯದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಸಾಧ್ಯತೆ ಇದ್ದು, ವಿಶೇಷವಾಗಿ ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -spot_img

More articles

- Advertisement -spot_img

Latest article