No menu items!
23.2 C
Munich
Wednesday, July 15, 2026

ಕರ್ನಾಟಕದಲ್ಲಿ ಮುಂಗಾರು; ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಹಲವು ಜಿಲ್ಲೆಗಳಿಗೆ ಬಿರುಗಾಳಿ ಮುನ್ಸೂಚನೆ

Must read

ಕರ್ನಾಟಕದಲ್ಲಿ ಮುಂಗಾರು; ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಹಲವು ಜಿಲ್ಲೆಗಳಿಗೆ ಬಿರುಗಾಳಿ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ದುರ್ಬಲಗೊಂಡಿರುವ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ತೀವ್ರತೆ ಕಡಿಮೆಯಾಗಿದೆ. ಆದಾಗ್ಯೂ, ಕರಾವಳಿ, ಮಲೆನಾಡು ಹಾಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 14 ಮತ್ತು 15ರಂದು ಸಾಧಾರಣ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬೆಂಗಳೂರು ಕೇಂದ್ರ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಈ ವೇಳೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಲ್ಲೂ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಬಿರುಗಾಳಿ ಬೀಸುವ ನಿರೀಕ್ಷೆಯಿದೆ. ಅಲ್ಲದೆ ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಿದ್ದರೂ, ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಇದೇ ವೇಳೆ ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲೂ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.

- Advertisement -spot_img

More articles

- Advertisement -spot_img

Latest article