No menu items!
18.4 C
Munich
Wednesday, July 15, 2026

ಮುಂದಿನ ಎರಡು ದಿನ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ; ಕರಾವಳಿ, ಮಲೆನಾಡಿಗೆ ಹವಾಮಾನ ಇಲಾಖೆ ಎಚ್ಚರಿಕೆ

Must read

ಮುಂದಿನ ಎರಡು ದಿನ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ; ಕರಾವಳಿ, ಮಲೆನಾಡಿಗೆ ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಸದ್ಯ ದುರ್ಬಲಗೊಂಡಿದ್ದರೂ, ಮುಂದಿನ ಎರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಜೊತೆಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.
ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲೂ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಿದ್ದರೂ, ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಇದೇ ಪ್ರಮಾಣದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.
ಮುಂದಿನ ದಿನವೂ ರಾಜ್ಯದಲ್ಲಿ ಬಹುತೇಕ ಇದೇ ರೀತಿಯ ಹವಾಮಾನ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.
ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲೂ ಮಳೆಯ ಚಟುವಟಿಕೆ ಮುಂದುವರಿಯಲಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದರೆ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಲವಾದ ಗಾಳಿ ಹಾಗೂ ಮಳೆಯ ಮುನ್ಸೂಚನೆ ಹಿನ್ನೆಲೆ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

- Advertisement -spot_img

More articles

- Advertisement -spot_img

Latest article