No menu items!
14.7 C
Munich
Thursday, July 23, 2026

ಕರ್ನಾಟಕದಲ್ಲಿ ಮತ್ತೆ ಚುರುಕಾದ ಮುಂಗಾರು; ಕರಾವಳಿ-ಮಲೆನಾಡಿನ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಎಚ್ಚರಿಕೆ

Must read

ಕರ್ನಾಟಕದಲ್ಲಿ ಮತ್ತೆ ಚುರುಕಾದ ಮುಂಗಾರು; ಕರಾವಳಿ-ಮಲೆನಾಡಿನ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಬಿರುಸು ಪಡೆದುಕೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಕೆಲವೆಡೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಇದಲ್ಲದೆ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲೂ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.
ಇದೇ ವೇಳೆ ಬಳ್ಳಾರಿ, ದಾವಣಗೆರೆ, ಮೈಸೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಗುಡುಗು, ಮಿಂಚು ಮತ್ತು ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರೀ ಮಳೆಯ ಮುನ್ಸೂಚನೆ ಇರುವ ಜಿಲ್ಲೆಗಳ ಜನರು ಅನಗತ್ಯವಾಗಿ ನದಿ, ಹೊಳೆ ಹಾಗೂ ತಗ್ಗು ಪ್ರದೇಶಗಳಿಗೆ ತೆರಳದಂತೆ ಹಾಗೂ ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ.

- Advertisement -spot_img

More articles

- Advertisement -spot_img

Latest article