ರಾಜ್ಯದಲ್ಲಿ ನಾಳೆಯಿಂದ ಮತ್ತೆ ವರುಣನ ಆರ್ಭಟ ಶುರುವಾಗಲಿದೆ ಎಂದು ಹವಮಾನ ಇಲಾಖೆ ಸೂಚಿಸಿದೆ.
ಅಕ್ಟೋಬರ್ 5 ರಿಂದ ,ಸತತ 5 ದಿನಗಳ ಕಾಲ ಭಾರೀ ಮಳೆ ಆಗಲಿದೆ.
ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ದಕ್ಷಿಣ ಒಳನಾಡು ಭಾಗದಲ್ಲಿ ಅಧಿಕ ಮಳೆಯಾಗಲಿದೆ. ಮಲೆನಾಡು ಹಾಗೂ ಕರಾವಳಿ ಸೇರಿದಂತೆ ಬೆಂಗಳೂರು ಭಾಗದಲ್ಲೂ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.

ಅ.5ರಿಂದ ಎರಡು ದಿನಗಳ ಕಾಲ ಕರಾವಳಿ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅ.8ರಂದು ಚಾಮರಾಜನಗರ, ಮಂಡ್ಯ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ,
ಅ.5ರಿಂದ ಎರಡು ದಿನಗಳ ಕಾಲ ಕರಾವಳಿ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅ.8ರಂದು ಚಾಮರಾಜನಗರ, ಮಂಡ್ಯ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆ ಆಗಲಿದೆಯಂತೆ.






