No menu items!
21.3 C
Munich
Sunday, June 28, 2026

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ; ಕರಾವಳಿಗೆ ಯೆಲ್ಲೋ ಅಲರ್ಟ್

Must read

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ; ಕರಾವಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯ ನಿರೀಕ್ಷೆ ಇದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ಗಂಟೆಗೆ 30–40 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಭಾಗದ ಸಾರ್ವಜನಿಕರು ಹಾಗೂ ಮೀನುಗಾರರು ಬಿರುಗಾಳಿ ಮತ್ತು ಭಾರಿ ಮಳೆಯ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

- Advertisement -spot_img

More articles

- Advertisement -spot_img

Latest article