No menu items!
19.6 C
Munich
Tuesday, April 28, 2026

ಇಂದು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಸಾಧಾರಣ ಮಳೆಯ ಸಾಧ್ಯತೆ: ಹವಾಮಾನ ಇಲಾಖೆ

Must read

ಇಂದು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಸಾಧಾರಣ ಮಳೆಯ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದರ ಜೊತೆಗೆ ರಾಜ್ಯದ ಹಲವು ಭಾಗಗಳಲ್ಲಿ ಒಣ ಹವೆಯ ವಾತಾವರಣ ಮುಂದುವರಿಯಲಿದೆ.
ದಕ್ಷಿಣ ಒಳನಾಡು ಜಿಲ್ಲೆಗಳು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಈ ಭಾಗಗಳಲ್ಲಿ ಮಳೆ ಸಾಧ್ಯತೆ ಬಹಳ ಕಡಿಮೆ.

ಅದೇ ರೀತಿ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಇಂದು ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಜಿಲ್ಲೆಗಳುಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಈ ಭಾಗಗಳಲ್ಲಿಯೂ ಸಂಪೂರ್ಣವಾಗಿ ಒಣ ಹವೆ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು:
ಗಾಳಿಯ ವೇಗ: 16 ಕಿ.ಮೀ ಪ್ರತಿ ಗಂಟೆ
ಗರಿಷ್ಠ ತಾಪಮಾನ: 28°C
ಕನಿಷ್ಠ ತಾಪಮಾನ: 17°C

- Advertisement -spot_img

More articles

- Advertisement -spot_img

Latest article