ಇಂದು ಸಹ ಸಾಧಾರಣ ಮಳೆ ಮುಂದುವರಿಯುತ್ತೆ !

admin
0 Min Read

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಮಾನ ಇಲಾಖೆ ಮಾಹಿತಿ ಪ್ರಕಾರ, ಇಂದು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮ ನಗರದ ವಿವಿಧ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮಳೆ ಸುರಿಯಬಹುದು.

ಅಲ್ಲದೇ ಸಂಜೆ ವೇಳೆಗೆ ಮಳೆ ಸುರಿಸುವ ಮಾರುತಗಳು ಬೆಂಗಳೂರು ನಗರ ಭಾಗದಲ್ಲಿ ಪ್ರಬಲವಾಗುವ ನಿರೀಕ್ಷೆ ಇದೆ. ಈ ವೇಳೆ ನಗರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Share This Article
Leave a Comment