ಬೆಂಗಳೂರಿನಲ್ಲಿ ನಾಳೆ ಜೋರು ಮಳೆ..!

Date:

 

ಬೆಂಗಳೂರಿನಲ್ಲಿ ನಾಳೆ ಜೋರು ಮಳೆ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಈ ಹಿನ್ನೆಲೆ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ಭಾರಿ ಮಳೆ ಸುರಿಯಲಿದೆ. ಈ ವಳೆ ಮೋಡ ಮುಸುಕಿದ, ಚಳಿಯ ವಾತಾವರಣ ನಿರ್ಮಾಣವಾಗಲಿದೆ. ತಾಪಮಾನ ಗರಿಷ್ಠ 30ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20ಡಿಗ್ರಿ ಸೆಲ್ಸಿಯಸ್ ಕಂಡು ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಲ್ಲದೇ ದೇಶದ ಪೂರ್ವ ಭಾಗದಲ್ಲಿ ಹವಾಮಾನ ಬದಲಾವಣೆಗಳು ಉಂಟಾದರೆರೆ ಮಾತ್ರ ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳು ಸೇರಿದಂತೆ ಚಿತ್ರದುರ್ಗ, ಬಳ್ಳಾರಿ, ವಿಜಯಪುರ, ತುಮಕೂರು ಈ ಭಾಗದ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ, ಒಮ್ಮೊಮ್ಮೆ ಅತೀ ಮಳೆ ಬೀಳುತ್ತದೆ. ಆದರೆ ಮುಂಗಾರು ಆರಂಭದಲ್ಲಿ ಈ ರೀತಿಯ ಮಳೆ ಆಗಿದ್ದು ಬಿಟ್ಟರೆ ಬೆಂಗಳೂರು ಜುಲೈ ತಿಂಗಳಲ್ಲಿ ಕೇವಲ ಸಾಮಾನ್ಯ ಮಳೆ ಹಾಗೂ ಮೋಡ ಮುಸುಕಿದ ವಾತಾವರಣನ್ನೇ ಕಂಡಿದೆ. ಇದರ ಹೊರತು ಎಲ್ಲಿಯೂ ದಾಖಲೆಯ ಮಳೆ ಬಿದ್ದಿಲ್ಲ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

Share post:

Subscribe

spot_imgspot_img

Popular

More like this
Related

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ ಶೋಧ

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ...

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್...

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್ದೇವನಹಳ್ಳಿ: ಕೆಂಪೇಗೌಡ...

ಪರಿಶಿಷ್ಟ ಜಾತಿ, ಪಂಗಡಗಳು, ಹಿಂದುಳಿದ ವರ್ಗಗಳಲ್ಲಿ ಬಡವರಿಲ್ಲವೇ?: ವಿಜಯೇಂದ್ರ

ಪರಿಶಿಷ್ಟ ಜಾತಿ, ಪಂಗಡಗಳು, ಹಿಂದುಳಿದ ವರ್ಗಗಳಲ್ಲಿ ಬಡವರಿಲ್ಲವೇ?: ವಿಜಯೇಂದ್ರ ಬೆಳಗಾವಿ: ರಾಜ್ಯದ ಕಾಂಗ್ರೆಸ್...