ರಾಜಕಾಲುವೆ ಒತ್ತುವರಿ ಮಾಡಿಕೊಂಡವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

Date:

ರಾಜಕಾಲುವೆ ಒತ್ತುವರಿ ಮಾಡಿಕೊಂಡವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಬೆಂಗಳೂರಿನ ತಹಶೀಲ್ದಾರ್ ಕೋರ್ಟ್ ಆದೇಶ ನೀಡಿದೆ. ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡಿದ್ದ ಬಾಗ್ಮನೆ ಟೆಕ್ ಪಾರ್ಕ್, ಪೂರ್ವ ಪಾರ್ಕ್ ರಿಡ್ಜ್ ಸೇರಿದಂತೆ ಹಲವರು ಒತ್ತುವರಿ ತೆರವಿಗೆ ತಡೆ ಕೋರಿ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಅರ್ಜಿ ವಿಚಾರಣೆ ನಡೆಸಿರುವ ಬೆಂಗಳೂರು ತಹಶೀಲ್ದಾರ್ ಕೋರ್ಟ್, ಒತ್ತುವರಿ ತೆರವಿಗೆ ಆದೇಶ ನೀಡಿದೆ. ಸರ್ವೆ ನಂ 35/1, 35/2, 35/3, 38/2 ಹಾಗೂ 85ರಲ್ಲಿ ತೆರವು ಮಾಡುವಂತೆ ಆದೇಶಿಸಿದೆ. ಕಟ್ಟಡದ ಮಾಲೀಕರೇ ಸ್ವಂತ ಖರ್ಚಿನಲ್ಲಿ ಒತ್ತುವರಿ ತೆರವು ಮಾಡಬೇಕು. ಇಲ್ಲವಾದಲ್ಲಿ ಪಾಲಿಕೆಯ ಸರ್ವೇಯರ್ ನೆರವು ಪಡೆಯಬಹುದು. ಅದಕ್ಕೆ ತಗುಲುವ ವೆಚ್ಚವನ್ನು ಒತ್ತುವರಿದಾರರೇ ಭರಿಸಬೇಕು ಎಂದು ಸೂಚಿಸಿದೆ. ಅಲ್ಲದೇ ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆಯೂ ಆದೇಶ ಹೊರಡಿಸಿದೆ.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...