ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ ಅವರನ್ನು ಬಂಧಿಸಿದ್ದಾರೆ.
ಬೆಂಗಳೂರಿನ ದೊಡ್ಡಬಿದರಕಲ್ಲಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿತ್ತು. ಈ ವೇಳೆ ಕಾರಿನಲ್ಲಿ ತೆರಳಿದ್ದ ರಾಮಕೃಷ್ಣ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ರಾಮಕೃಷ್ಣ ಮತ್ತು ಓರ್ವ ಪಿಂಪ್ ಅನ್ನು ಪೊಲೀಸರು ಬಂಧಿಸಿ, ಇಬ್ಬರು ಹುಡುಗಿಯರನ್ನು ರಕ್ಷಿಸಿದ್ದಾರೆ.
ರಾಮಕೃಷ್ಣ ಲಿಡ್ಕರ್ ನ ಮಾಜಿ ಅಧ್ಯಕ್ಷ. ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಆಪ್ತರಲ್ಲಿ ಒಬ್ಬ…! ಇದೀಗ ಇವರು ವೇಶ್ಯಾವಾಟಿಕೆ ದಂಧೆಯಲ್ಲಿ ಸಿಕ್ಕಿ ಬಿದ್ದು ಪೇಚಿಗೆ ಸಿಲುಕಿದ್ದಾರೆ ಹಾಗೂ ಕಾಂಗ್ರೆಸ್ ತಲೆ ತಗ್ಗಿಸುವಂತೆ ಮಾಡಿದ್ದಾರೆ.