ನಟಿ, ಮಾಜಿ ಸಂಸದೆ ರಮ್ಯಾ ಅವರ ಎಐಸಿಸಿ ಸಾಮಾಜಿಯ ಜಾಲತಾಣ ವಿಭಾಗದ ಮುಖ್ಯಸ್ಥೆ ಸ್ಥಾನಕ್ಕೆ ಕತ್ತರಿ ಬಿದ್ದಿದೆ , ಅಷ್ಟೇ ಅಲ್ಲದೆ ರಾಹುಲ್ ಗಾಂಧಿ ಅವರ ಟ್ವೀಟ್ ಮತ್ತು ಸಾರ್ವಜನಿಕ ಭಾಷಣಗಳ ಉಸ್ತುವಾರಿಯಿಂದಲೂ ಕೋಕ್ ನೀಡಲಾಗಿದೆ ಎಂದು ವರದಿಯಾಗಿದೆ.
ರಮ್ಯಾ ಅಧಿಕೃತವಾಗಿ ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥೆಯಾಗಿದ್ದರೂ ಅನಗತ್ಯವಾದ ಟ್ವೀಟ್ ಮಾಡುವುದನ್ನು ನಿರ್ಬಂಧಿಸಲಾಗಿದೆ ಎಂದು ಹೇಳಲಾಗುತ್ತಿದೆ.
ರಮ್ಯಾ ಅವರ ಜಾಗಕ್ಕೆ ಮಾಜಿ ಕೇಂದ್ರ ಸಚಿವೆ ಮಾರ್ಗರೇಟ್ ಆಳ್ವಾ ಅವರ ಪುತ್ರ ನಿಖಿಲ್ ಆಳ್ವಾಗೆ ಜವಬ್ದಾರಿ ನೀಡಲಾಗಿದೆ ಎನ್ನಲಾಗಿದೆ.
ರಮ್ಯಾ ಪ್ರಧಾನಿ ಮೋದಿ ಅವರ ವಿರುದ್ಧ ಟ್ವೀಟ್ ಮಾಡುವ ಭರದಲ್ಲಿ ಪಕ್ಷಕ್ಕೆ ಮುಜುಗರ ಉಂಟಾಗುವಂತೆ ಮಾಡಿದ್ದರು. ಅಷ್ಟೇ ಅಲ್ಲದೆ ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ತರಬೇತಿ ನೀಡುವ ವೇಳೆ ಸಾಮಾಜಿಕ ಜಾಲತಾಣಗಳಲ್ಲು ನಕಲಿ ಖಾತೆ ತೆರೆಯುವಂತೆ ಸಲಹೆ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಅವರ ಜವಬ್ದಾರಿಗೆ ಕತ್ತರಿ ಹಾಕಲಾಗಿದೆ ಎಂದು ತಿಳಿದುಬಂದಿದೆ.






