Ranya Rao: ಅಕ್ರಮ ಚಿನ್ನ ಸಾಗಣೆ ಪ್ರಕರಣ: ನಟಿ ರನ್ಯಾರಾವ್‌’ಗೆ ಜಾಮೀನು ಮಂಜೂರು

Date:

Ranya Rao: ಅಕ್ರಮ ಚಿನ್ನ ಸಾಗಣೆ ಪ್ರಕರಣ: ನಟಿ ರನ್ಯಾರಾವ್‌’ಗೆ ಜಾಮೀನು ಮಂಜೂರು

 

ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಾಣಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಮಂಜೂರು ಮಾಡುವ ಮೂಲಕ ನಟಿ ರನ್ಯಾ ರಾವ್ ಗೆ  ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ರಿಲೀಫ್ ನೀಡಿದೆ. ಜೊತೆಗೆ ಪ್ರಕರಣದ 2ನೇ ಆರೋಪಿ ತರುಣ್‌ ಕೊಂಡರಾಜುಗೂ ಜಾಮೀನು ಮಂಜೂರು ಮಾಡಿ ಕೋರ್ಟ್‌ ಆದೇಶಿಸಿದೆ. 60 ದಿನ ಕಳೆದರೂ ಡಿಆರ್‌ಐ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸದ ಹಿನ್ನೆಲೆ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇಬ್ಬರು ಶ್ಯೂರಿಟಿ, 2 ಲಕ್ಷ ರೂ. ಬಾಂಡ್ ಮೇಲೆ ಜಾಮೀನು ನೀಡಲಾಗಿದೆ. ಅಲ್ಲದೇ ಮುಂದೆ ಇಂತಹ ಕೃತ್ಯಗಳಲ್ಲಿ ಭಾಗಿಯಾದಂತೆ ಹಾಗೂ ದೇಶ ಬಿಟ್ಟು ಹೊರಗೆ ಹೋಗದಂತೆ ಸೂಚನೆ ನೀಡಿದೆ. ರನ್ಯಾರಾವ್ ಪರವಾಗಿ ವಕೀಲ ಗಿರೀಶ್ ವಾದ ಮಂಡಿಸಿದರು.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ!

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ! ಬೆಂಗಳೂರು:...

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ...

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ ಬೆಂಗಳೂರು:...

ರೆಡ್ ವೈನ್ ಕುಡಿಯುವುದು ನಿಜವಾಗಿಯೂ ಹೃದಯಕ್ಕೆ ಒಳ್ಳೆಯದೇ? ಇಲ್ಲಿದೆ ಮಾಹಿತಿ

ರೆಡ್ ವೈನ್ ಕುಡಿಯುವುದು ನಿಜವಾಗಿಯೂ ಹೃದಯಕ್ಕೆ ಒಳ್ಳೆಯದೇ? ಇಲ್ಲಿದೆ ಮಾಹಿತಿ ರೆಡ್ ವೈನ್‌...