ಫೇಸ್‍ಬುಕ್ ನಲ್ಲಿ ಬಾಲಕಿಯನ್ನು ಪರಿಚಯಿಸಿಕೊಂಡು ಇಬ್ಬರು ಕಾಮುಕರು ಆಕೆಯ ಮೇಲೆ ಅತ್ಯಾಚಾರವೆಸಗಿರೋ ಘಟನೆ ಬೆಂಗಳೂರಲ್ಲಿ ನಡೆದಿದೆ.
17 ವರ್ಷದ ಬಾಲಕಿಯನ್ನು ಫೇಸ್ ಬುಕ್ ನಲ್ಲಿ ಪರಿಚಯಿಸಿಕೊಂಡಿದ್ದ ಜಾನ್ಸನ್ ಎಂಬಾತ ಆಕೆಯನ್ನು ಗೆದ್ದಲಹಳ್ಳಿ ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ…! ಜಾನ್ಸನ್ ನ ಸ್ನೇಹಿತ ಸಲ್ಮಾನ್ ಎಂಬಾತ ವೀಡಿಯೋ ಮಾಡಿದ್ದಾನೆ. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಬ್ಬರು ತಲೆಮರೆಸಿಕೊಂಡಿದ್ದಾರೆ.