ಇದೇ ವರ್ಷ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ವಿವಾಹ ಮಹೋತ್ಸವ ನಡೆಯಲಿದೆ ಎಂಬ ಸುದ್ದಿ ಎಲ್ಲೆಡೆ ಹಬ್ಬಿತ್ತು. ಈ ಗಾಳಿಮಾತು ವಿಜಯ್ ದೇವರಕೊಂಡ ಅವರ ಕಿವಿಗೂ ಬಿದ್ದಿದೆ. ಹೀಗಾಗಿ ಮದುವೆ
ಗಾಸಿಪ್ ಬಗ್ಗೆ ವಿಜಯ್ ದೇವರಕೊಂಡ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಪರಭಾಷೆಯಲ್ಲಿ ಬಹುಬೇಡಿಕೆ ಪಡೆದುಕೊಂಡಿರುವ ಕನ್ನಡ ನಟಿ ರಶ್ಮಿಕಾ ಮಂದಣ್ಣ ಮತ್ತು ತೆಲುಗು ನಟ ವಿಜಯ್ ದೇವರಕೊಂಡ ಬಗ್ಗೆ ಇತ್ತೀಚೆಗಷ್ಟೇ ಒಂದು ವದಂತಿ ಕೇಳಿಬಂದಿತ್ತು. ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಇದೇ ವರ್ಷ ಮದುವೆಯಾಗ್ತಾರೆ ಎಂಬ ಅಂತೆ – ಕಂತೆ ಇದ್ದಕ್ಕಿದ್ದ ಹಾಗೆ ಕಾಡ್ಗಿಚ್ಚಿನಂತೆ ಹಬ್ಬಿತ್ತು.
ರಶ್ಮಿಕಾ ಮಂದಣ್ಣ ಜೊತೆ ಇದೇ ವರ್ಷ ವಿಜಯ್ ಮದುವೆಯಾಗ್ತಾರಂತೆ ಎಂಬ ಸುದ್ದಿ ಹರಿದಾಡುತ್ತಿದಂತೆ ವಿಜಯ್ ತಮ್ಮ ಸೋಶಿಯಲ್ ಮೀಡಿಯಾ ಮೂಲಕ ಈ ಬಗ್ಗೆ ಪ್ರತಿಕ್ರಿಯಿದಿದ್ದಾರೆ ‘’ಎಂದಿನಂತೆ ಇದು ಅಸಂಬದ್ಧ. ಈ ಸುದ್ದಿಯನ್ನ ನಾವು ಇಷ್ಟ ಪಡದೇ ಇರ್ತೀವಾ!’’ ಎಂದು ಟ್ವೀಟ್ ಮಾಡಿದ್ದಾರೆ.
ತೆಲುಗು ನಟ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಒಟ್ಟಿಗೆ ಅಭಿನಯಿಸಿದ್ದವರು. ಮೊದಲ ಬಾರಿಗೆ ಇವರಿಬ್ಬರು ಒಟ್ಟಿಗೆ ಕಾಣಿಸಿಕೊಂಡಿದ್ದು ತೆಲುಗಿನ ‘ಗೀತ ಗೋವಿಂದಂ’ ಸಿನಿಮಾದಲ್ಲಿ. ‘ಗೀತ ಗೋವಿಂದಂ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಬಳಿಕ ‘ಡಿಯರ್ ಕಾಮ್ರೇಡ್’ ಸಿನಿಮಾದಲ್ಲೂ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಜೋಡಿಯಾಗಿ ಮಿಂಚಿದ್ದರು.
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮಧ್ಯೆ ಪ್ರೀತಿ ಇದೆ ಎಂಬ ಗುಸುಗುಸು ಕೇಳಿಬರುತ್ತಿದ್ದರೂ, ಈ ಬಗ್ಗೆ ಈವರೆಗೂ ಇಬ್ಬರು ಕೂಡ ಯಾವುದೇ ರೀತಿ ಪ್ರತಿಕ್ರಿಯೆ ನೀಡಿಲ್ಲ.