ಚಾಮರಾಜಪೇಟೆಯ ಈದ್ಗಾ ಮೈದಾನ ಸಾರ್ವಜನಿಕರ ಆಸ್ತಿ, ಈ ನಿಟ್ಟಿನಲ್ಲಿ ನಾವೂ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ಧಾರೆ. ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಉತ್ಸವ ಆಚರಣೆ ಸಂಬಂಧ ಸುಪ್ರೀಂ ಕೋರ್ಟ್ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಆರ್. ಅಶೋಕ್ ‘ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇವೆ ಹಾಗೂ ಪಾಲನೆ ಮಾಡ್ತೇವೆ. ಸ್ವಾತಂತ್ರ್ಯ ದಿನಾಚರಣೆಯಂತೆ ಗಣೇಶ ಹಬ್ಬ ಆಚರಣೆ ಮಾಡುವ ನಿರೀಕ್ಷೆಯಲ್ಲಿ ಬೆಂಗಳೂರಿನ ಹಾಗೂ ಚಾಮರಾಜಪೇಟೆ ಜನರು ಇದ್ದರು. ಆದರೆ ಸುಪ್ರೀಂ ಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೇಳಿದೆ. ಈದ್ಗಾ ಮೈದಾನ ಸಾರ್ವಜನಿಕರ ಆಸ್ತಿ. ಆ ನಿಟ್ಟಿನಲ್ಲಿ ನಾವೂ ನ್ಯಾಯಾಲಯದಲ್ಲಿ ಹೋರಾಟ ನಡೆಸುತ್ತೇ ವೆ. ಟೈಟಲ್ ನೂರಕ್ಕೆ ನೂರರಷ್ಟು ನಮಗೆ ಆಗುತ್ತೆ ಎಂಬ ವಿಶ್ವಾಸ ಇದೆ. ಯಾವುದೇ ಧರ್ಮಕ್ಕೆ ಮೈದಾನ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಚಾಮರಾಜಪೇಟೆ ನಾಗರೀಕರ ಒಕ್ಕೂಟ ಬೇರೆ ಜಾಗದಲ್ಲಿ ಸ್ಥಳೀಯ ಸಂಸ್ಥೆಯ ಅನುಮತಿ ಪಡೆದು ಗಣೇಶ ಉತ್ಸವ ಆಚರಣೆ ಮಾಡಲಿ ಎಂದು ಅಶೋಕ್ ಅವರು ತಿಳಿಸಿದ್ಧಾರೆ.
ಚಾಮರಾಜಪೇಟೆಯ ಈದ್ಗಾ ಮೈದಾನ ಸಾರ್ವಜನಿಕರ ಆಸ್ತಿ
Date: