ಸಹೋದ್ಯೋಗಿ ಸುನಿಲ್ ಹೆಗ್ಗರವಳ್ಳಿ ಅವರನ್ನು ಕೊಲ್ಲಲು ಸುಪಾರಿ ಕೊಟ್ಟ ಆರೋಪದ ಮೇಲೆ ಸಿಸಿಬಿ ಪೊಲೀಸರು ಪತ್ರಕರ್ತ ರವಿ ಬೆಳಗೆರೆ ಅವರನ್ನು ಅರೆಸ್ಟ್ ಮಾಡಿದ್ದಾರೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರದ ಚಡಚಣದ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಭೀಮಾ ತೀರದ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿ ನಾನು ಗೌರಿ ಲಂಕೇಶ್ ಅವರನ್ನು ಕೊಂದಿಲ್ಲ. ಆದ್ರೆ, ಹಾಯ್ ಬೆಂಗಳೂರು ಪತ್ರಿಕೆಯ ಸುನೀಲ್ ಹೆಗ್ಗರವಳ್ಳಿಯನ್ನು ಕೊಲ್ಲಲು ರವಿ ಬೆಳಗೆರೆ ಅವರಿಂದ 30 ಲಕ್ಷ ರೂ ಗೆ ಸುಪಾರಿ ಪಡೆದಿದ್ದಾನೆ ಎಂಬ ಬೆಚ್ಚಿ ಬೀಳಿಸೋ ವಿಷಯವನ್ನು ತಿಳಿಸಿದ್ದಾನೆ.
ಈ ಹಿನ್ನೆಲೆಯಲ್ಲಿ ಪದ್ಮನಾಭನಗರದ ನಿವಾಸದಲ್ಲಿ ರವಿ ಬೆಳಗೆರೆಯವನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರವಿ ಬೆಳಗೆರೆ ಅವರ 2 ನೇ ಹೆಂಡ್ತಿಯ ಜೊತೆ ಸುನೀಲ್ ಹೆಗ್ಗರವಳ್ಳಿ ಅಕ್ರಮ ಸಂಬಂಧವಿಟ್ಟುಕೊಂಡಿದ್ದರು. ಅದಕ್ಕಾಗಿ ರವಿ ಬೆಳಗೆರೆ ಸುಪಾರಿ ಕೊಟ್ಟಿದ್ದರು ಎನ್ನಲಾಗಿದೆ.