ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಕುರಕನೂರು ಬಳಿ ನಡೆದಿದೆ.
ಭಗವಂತ (18) ಮೃತ. ಈತ ಎಂದಿನಂತೆ ತರಕಾರಿ ಮಾರಲು ಕುರಕನೂರಿನಿಂದ ರಾಯಚೂರಿಗೆ ಹೊರಟಿದ್ದ. ಈ ವೇಳೆ ಅತಿವೇಗದಲ್ಲಿ ಬಂದ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಭಗವಂತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈತನ ಕಣ್ಣುಗಳನ್ನು ದಾನ ಮಾಡಲು ಕುಟುಂಬದವರು ಮುಂದಾಗಿದ್ದಾರೆ. ರಾಯಚೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.