ಬೆಂಗಳೂರಿಗೆ ಬಂದಿಳಿದ RCB ಆಟಗಾರರನ್ನು ಸ್ವಾಗತಿಸಿದ ಡಿಕೆ ಶಿವಕುಮಾರ್

tnit editors
1 Min Read

ಬೆಂಗಳೂರಿಗೆ ಬಂದಿಳಿದ RCB ಆಟಗಾರರನ್ನು ಸ್ವಾಗತಿಸಿದ ಡಿಕೆ ಶಿವಕುಮಾರ್

ಬೆಂಗಳೂರು: ಅಹಮದಾಬಾದ್ನಿಂದ ನೇರವಾಗಿ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಜತ್ ಪಾಟಿದಾರ್ ನೇತೃತ್ವದ ಆರ್ಸಿಬಿ ತಂಡವನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ವಾಗತಿಸಿದರು.
ಹೌದು ಐಪಿಎಲ್ ಕಪ್ ಜಯಿಸಿ ತವರಿಗೆ ಮರಳಿರುವ ಆರ್ಸಿಬಿ ಕ್ರಿಕೆಟ್ ತಂಡಕ್ಕೆ ಬೆಂಗಳೂರಿನಲ್ಲಿ ಅಭಿಮಾನಿಗಳಿಂದ ಅದ್ದೂರಿ ಸ್ವಾಗತ ದೊರೆತಿದೆ. ಗುಜರಾತ್ನ ಅಹ್ಮದಾಬಾದ್ನಿಂದ ಬೆಂಗಳೂರಿನ ಹೆಚ್ಎಎಲ್ಗೆ ಬಂದಿಳಿದ ಆರ್ಸಿಬಿ ಆಟಗಾರರನ್ನು ಸರ್ಕಾರದ ಪರವಾಗಿ ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಿದರು.
ಆರ್ಸಿಬಿ ಆಟಗಾರರನ್ನು ವಿಶೇಷ ಬಸ್ಸುಗಳಲ್ಲಿ ವಿಧಾನಸೌಧಕ್ಕೆ ಕರೆದುಕೊಂಡು ಹೋಗಲಾಗುತ್ತಿದೆ. ಅಲ್ಲಿ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಟಗಾರರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಲಿದ್ದಾರೆ.
ವಿಧಾನಸೌಧದಿಂದ ಆಟಗಾರರನ್ನು ನೇರವಾಗಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕರೆದೊಯ್ಯಲಾಗುತ್ತದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಜೆ 6 ಗಂಟೆಗೆ ಪರೇಡ್ ನಡೆಯಲಿದ್ದು, ಆಟಗಾರರಿಗೆ ಅಭಿನಂದನೆಗಳನ್ನು ಸಲ್ಲಿಸಲಾಗುತ್ತದೆ.

Share This Article