ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಆಗಿದೆ. ಇದಕ್ಕೆ ದರ್ಶನ್ ಹಾಗೂ ಅವರ ಗ್ಯಾಂಗ್ ಕಾರಣ ಎನ್ನುವ ಆರೋಪ ಬಂದಿದೆ. ಇಂದಿಗೆ 17 ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಹೀಗಾಗಿ, ಇಂದುಮಧ್ಯಾಹ್ನದ ನಂತರ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ರೇಣುಕಾಸ್ವಾಮಿ ಕೊಲೆ ನಡೆದ ಸ್ಥಳ, ಕಿಡ್ನ್ಯಾಪ್ ಸ್ಥಳ, ಮೃತದೇಹ ಸಿಕ್ಕ ಸ್ಥಳ ಸೇರಿ ಆರೋಪಿಗಳ ಮನೆಯಲ್ಲಿ ಪೊಲೀಸರು ಮಹಜರು ಪೂರ್ಣ ಮಾಡಿದ್ದಾರೆ. ಜೊತೆಗೆ ಕೃತ್ಯಕ್ಕೆ ಬಳಸಿದ ಹಲವು ವಸ್ತುಗಳನ್ನ ಸೀಜ್ ಮಾಡಲಾಗಿದೆ. ಹೀಗಾಗಿ ಇಂದು ಕೋರ್ಟ್ ಹಾಜರುಪಡಿಸಿ ದರ್ಶನ್ನನ್ನ ಮತ್ತೆ ಕಸ್ಟಡಿಗೆ ಕೇಳೋದು ಡೌಟ್ ಅಂತಾ ಹೇಳಲಾಗುತ್ತಿದೆ.
ಇನ್ನು, ಇಂದು ದರ್ಶನ್ ಆಯಂಡ್ ಗ್ಯಾಂಗ್‌ನ ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ನಿನ್ನೆಯೇ 17 ಆರೋಪಿಗಳಿಗೆ ಮೆಡಿಕಲ್ ಚೆಕಪ್ ನಡೆಸಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದರ್ಶನ್, ಪವಿತ್ರಾಗೌಡ ಸೇರಿ 17 ಮಂದಿಗೆ ಮೆಡಿಕಲ್ ಚೆಕಪ್ ಮಾಡಿಸಲಾಗಿದೆ. ಪವಿತ್ರಾಗೌಡಗೆ ಇಸಿಜಿ ಹಾಗೂ ಬಿಪಿ ಪಲ್ಸ್ ಚೆಕಪ್ ಮಾಡಲಾಗಿದೆ.
ಈಗಾಗಲೇ ಪ್ರಕರಣ ಸಂಬಂಧ ದರ್ಶನ್ ಹಾಗೂ ತಂಡವನ್ನು ಎರಡು ಬಾರಿ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ಮಾಡಲಾಗಿದೆ. ಪೊಲೀಸ್ ಕಸ್ಟಡಿ ವೇಳೆ ಆರೋಪಿಗಳ ಸ್ವ ಇಚ್ಛಾ ಹೇಳಿಕೆ, ಸ್ಥಳ ಮಹಜರು ಸೇರಿ ಹಲವು ಮಹತ್ವದ ಸಾಕ್ಷ್ಯ ಕಲೆ ಹಾಕಲಾಗಿದೆ. ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ವಹಿಸುವಂತೆ ಪೊಲೀಸರ ಮನವಿ ಮಾಡೋ ಸಾಧ್ಯತೆ ಇದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಂದಿಗೆ 17 ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯ
Date: