ಬೆಂಗಳೂರಿನಲ್ಲಿ ರೌಡಿಗಳಿಗೆ ಬೆಳ್ಳಂಬೆಳಗ್ಗೆ ಪೊಲೀಸ್ ಶಾಕ್!

Must read

ಬೆಂಗಳೂರಿನಲ್ಲಿ ರೌಡಿಗಳಿಗೆ ಬೆಳ್ಳಂಬೆಳಗ್ಗೆ ಪೊಲೀಸ್ ಶಾಕ್!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರೌಡಿಸಂ ಮತ್ತು ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಕಾರ್ಯಾಚರಣೆ ನಡೆಸಿದೆ. ಬೆಳ್ಳಂಬೆಳಗ್ಗೆ ನಗರದಾದ್ಯಂತ ರೌಡಿಶೀಟರ್‌ಗಳ ಮನೆಗಳ ಮೇಲೆ ಸಿಸಿಬಿ ರೌಡಿ ಸ್ಕ್ವಾಡ್ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆ ಹಾಗೂ ಪೊಲೀಸ್ ಆಯುಕ್ತ ಆರ್. ಹಿತೇಂದ್ರ ಅವರ ಎಚ್ಚರಿಕೆ ಬೆನ್ನಲ್ಲೇ ಈ ಕಾರ್ಯಾಚರಣೆ ನಡೆದಿದೆ. ರೌಡಿ ಸ್ಕ್ವಾಡ್ ಮುಖ್ಯಸ್ಥ ಹಾಗೂ ಸಂಚಾರ ವಿಭಾಗದ ಆಯುಕ್ತ ಹೇಮಂತ್ ನಿಂಬಾಳ್ಕರ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ನಗರದ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ.
ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯ ನೂರಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳನ್ನು ಏಕಕಾಲದಲ್ಲಿ ಪರಿಶೀಲಿಸಲಾಗಿದೆ. ಈ ಪೈಕಿ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯೋತಿನಗರದಲ್ಲಿರುವ ರೌಡಿಶೀಟರ್ ಕಿಶೋರ್ ಅಲಿಯಾಸ್ ಗುಡ್ಡೆ ಮನೆಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ಗೀತಾ ಹಾಗೂ ರಾಮಮೂರ್ತಿನಗರ ಎಸಿಪಿ ಅನುಷಾ ಪರಿಶೀಲನೆ ನಡೆಸಿದ್ದಾರೆ.
ಪೊಲೀಸ್ ಆಯುಕ್ತ ಆರ್. ಹಿತೇಂದ್ರ ಹಾಗೂ ರೌಡಿ ಸ್ಕ್ವಾಡ್ ಮುಖ್ಯಸ್ಥ ಹೇಮಂತ್ ನಿಂಬಾಳ್ಕರ್ ಕೂಡ ನಗರದಲ್ಲಿ ಸುತ್ತಾಡಿ ಕಾರ್ಯಾಚರಣೆಯ ಪರಿಶೀಲನೆ ನಡೆಸಿದ್ದಾರೆ.

- Advertisement -spot_img

More articles

- Advertisement -spot_img

Latest article