No menu items!
26.3 C
Munich
Wednesday, September 16, 2026

ರೇಣುಕಾಸ್ವಾಮಿ ಕೇಸ್ʼನಲ್ಲಿ ನಟ ದರ್ಶನ್ಗೆ ಬಿಗ್ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಪುರಸ್ಕರಿಸಿದ ಕೋರ್ಟ್!

Must read

ರೇಣುಕಾಸ್ವಾಮಿ ಕೇಸ್ʼನಲ್ಲಿ ನಟ ದರ್ಶನ್ಗೆ ಬಿಗ್ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಪುರಸ್ಕರಿಸಿದ ಕೋರ್ಟ್!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ಗೆ ಮತ್ತೊಂದು ಹಿನ್ನಡೆಯಾಗಿದೆ. ಪ್ರಕರಣದ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ CCH-59ನೇ ನ್ಯಾಯಾಲಯ ಅಂಗೀಕರಿಸಿದೆ.
ಪ್ರದೋಷ್ ವಿರುದ್ಧ ಜೈಲಿನಲ್ಲಿ ಅಕ್ರಮ ಮೊಬೈಲ್ ಬಳಕೆ ಆರೋಪದ ಹಿನ್ನೆಲೆಯಲ್ಲಿ ದೂರು ದಾಖಲಾಗುತ್ತಿದ್ದಂತೆ, ನಟ ದರ್ಶನ್ ಪರ ವಕೀಲರು ಪ್ರದೋಷ್ ಮಾಫಿ ಸಾಕ್ಷಿಯಾಗುವ ಪ್ರಕ್ರಿಯೆಯನ್ನು ತಡೆಹಿಡಿಯುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ದರ್ಶನ್ ಪರ ವಕೀಲರು, ಪ್ರದೋಷ್ ಪರ ವಕೀಲರು ಹಾಗೂ ವಿಶೇಷ ಸರ್ಕಾರಿ ಅಭಿಯೋಜಕರ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ಇದೀಗ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿಯನ್ನು ಅಂಗೀಕರಿಸಿದೆ.
ಇದೇ ವೇಳೆ ನ್ಯಾಯಾಲಯವು ಮಾಫಿ ಸಾಕ್ಷಿಗೆ ಸಂಬಂಧಿಸಿದ ನಿಯಮಗಳು ಹಾಗೂ ಷರತ್ತುಗಳನ್ನು ಪ್ರದೋಷ್ಗೆ ತಿಳಿಸಿದೆ. ಮುಂದಿನ ಪ್ರಕ್ರಿಯೆಗಾಗಿ ಶೀಘ್ರದಲ್ಲೇ ದಿನಾಂಕ ನಿಗದಿಪಡಿಸುವ ಸಾಧ್ಯತೆ ಇದೆ.
ಈ ಹಿಂದೆ ಹೈಕೋರ್ಟ್, ಪ್ರದೋಷ್ ಮಾಫಿ ಸಾಕ್ಷಿಯಾಗುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸೆಷನ್ಸ್ ಕೋರ್ಟ್ ನೀಡಿದ್ದ ಆದೇಶವನ್ನು ಮಾರ್ಪಡಿಸಿ, ಹೊಸ ಆದೇಶ ಹೊರಡಿಸುವಂತೆ ಸೂಚಿಸಿತ್ತು. ಹೈಕೋರ್ಟ್ ಸೂಚನೆಯಂತೆ ಇದೀಗ ಸೆಷನ್ಸ್ ಕೋರ್ಟ್ ಹೊಸ ಆದೇಶ ಹೊರಡಿಸಿದ್ದು, ಪ್ರದೋಷ್ ಮಾಫಿ ಸಾಕ್ಷಿಯಾಗುವ ಪ್ರಕ್ರಿಯೆಗೆ ಮುಂದಿನ ಹಂತಕ್ಕೆ ಅವಕಾಶ ಕಲ್ಪಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ನ್ಯಾಯಾಲಯ ಅನುಮತಿ ನೀಡಿರುವುದು ಪ್ರಕರಣದ ತನಿಖೆ ಮತ್ತು ಮುಂದಿನ ಕಾನೂನು ಪ್ರಕ್ರಿಯೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

- Advertisement -spot_img

More articles

- Advertisement -spot_img

Latest article