ಸಾರ್ವಜನಿಕ ಶಿಕ್ಷಣ ಇಲಾಖೆಯ ಅಲ್ಪಸಂಖ್ಯಾತರಲ್ಲದ ಅನುದಾನಿತ ಶಾಲೆಗಳಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ(ಆರ್‍ಟಿಇ) ಅಡಿ ಮಕ್ಕಳನ್ನು ಶಾಲೆಗೆ ದಾಖಲು ಮಾಡಿಕೊಳ್ಳಲು ಆಧಾರ್ ಕಡ್ಡಾಯಗೊಳಿಸಿದ್ದು, ಮುಂದಿನ 2017ನೇ ಸಾಲಿನ ಜ.15 ರಿಂದ ಫೆ.15ರವರೆಗೆ ಇಲಾಖೆಯ ಪೋರ್ಟಲ್ ಮೂಲಕ ಅರ್ಜಿಗಳನ್ನು ಸ್ವೀಕರಿಸಲಾಗುತ್ತೆ. ಇನ್ನು ಪೋಷಕರು ಮಕ್ಕಳ ಅರ್ಜಿಯನ್ನು ಸಲ್ಲಿಸೋ ಸಂದರ್ಭದಲ್ಲಿ ಮಕ್ಕಳ ಆಧಾರ್ ಕಾರ್ಡ್ ಜೊತೆಗೆ ತಂದೆ ಅಥವಾ ತಾಯಿ ಇಬ್ಬರಲ್ಲೊಬ್ಬರ ಆಧಾರ್ ಸಂಖ್ಯೆ, ಹೆಸರು, ಜನ್ಮದಿನಾಂಕ, ಲಿಂಗ ಮತ್ತು ವಿಳಾಸದ ಮಾಹಿತಿಯನ್ನು ಆಧಾರ್ ಕಾರ್ಡ್‍ಗಳಲ್ಲಿ ನಮೂದಿಸಿದ ರೀತಿಯಲ್ಲೇ ಸಲ್ಲಿಸಬೇಕು. ಈ ಅರ್ಜಿಯ ವಿವರಗಳನ್ನು ಯುಐಡಿಎಐ ಮಾಹಿತಿಯೊಂದಿಗೆ ತಾಳೆ ಮಾಡಲಾಗುತ್ತೆ. ಒಂದು ವೇಳೆ ನೀವು ಹಾಕಿದ ಅರ್ಜಿ ತಾಳೆಯಾಗದೇ ಇದ್ದ ಪಕ್ಷದಲ್ಲಿ ನಿಮ್ಮ ಅರ್ಜಿ ತಿರಸ್ಕೃತಗೊಳ್ಳುವ ಸಾಧ್ಯತೆ ಇದೆ. ಇನ್ನು ಅರ್ಜಿದಾರರು ಶಾಲೆಯ ಆಯ್ಕೆಗಳನ್ನು ಇತ್ಯರ್ಥಪಡಿಸಲು ಆಧಾರ್ ಕಾರ್ಡ್‍ನಲ್ಲಿ ನಮೂದಿಸಲಾಗಿರೊ ವಿಳಾಸವನ್ನು ಬಳಸಿಕೊಂಡು ನೆರೆಹೊರೆಯಲ್ಲಿರೊ ಖಾಸಗಿ ಅನುದಾನ ರಹಿತ ಶಾಲೆಗಳನ್ನು ಆಯ್ಕೆ ಮಾಡಲಾಗುತ್ತೆ. ಆದ್ದರಿಂದ ಪೋಷಕರು ತಮ್ಮ ಮಗುವಿನ ಆಧಾರ್ ಕಾರ್ಡ್‍ನಲ್ಲಿ ಹೆಸರು, ಜನ್ಮ ದಿನಾಂಕ, ಲಿಂಗ ಮತ್ತು ವಿಳಾಸ ಸರಿಯಾಗಿದೆಯೇ ಎಂಬುದನ್ನು ಈಗಲೇ ಖಚಿತಪಡಿಸಿಕೊಳ್ಳಬಹುದು. ಒಂದು ವೇಳೆ ಏನಾದರೂ ವಿವರಗಳು ತಪ್ಪಾಗಿದ್ದ ಪಕ್ಷದಲ್ಲಿ ಅವುಗಳನ್ನು ಆಧಾರ್ ನೊಂದಣಿ ಕೇಂದ್ರಗಳಲ್ಲಿ ಸರಿಪಡಿಸಿಕೊಳ್ಳಲು ಕೂಡಲೇ ಕ್ರಮ ವಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ.
Like us on Facebook The New India Times
ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333
POPULAR STORIES :
ಬಿಗ್‍ಬಾಸ್ ಮನೆಯಲ್ಲಿ ಸಖತ್ ವಾಕ್ಸಮರ..!
ದರ್ಶನ್‍ರನ್ನು ಬಿಗ್‍ಬಾಸ್ ವೇದಿಕೆಗೆ ಕರ್ದಿದೀರಾ ಎಂಬ ಅಭಿಮಾನಿಯ ಪ್ರಶ್ನೆಗೆ ಸುದೀಪ್ ಕೊಟ್ಟ ಉತ್ತರವೇನು..?
ಗುಡ್ ನ್ಯೂಸ್: ಚಿನ್ನದ ಬೆಲೆ 3000ರೂ ಇಳಿಕೆ..!
ನೀವು ಸ್ಮಾರ್ಟ್ ಫೋನ್ ಯೂಸ್ ಮಾಡ್ತೀರಾ..? ಹಾಗಾದ್ರೆ ಈ ಸ್ಟೋರಿ ಓದಿ..!
ಕುಡುಕರಿಗೆ ಶಾಕ್ ಕೊಟ್ಟ ಸುಪ್ರೀಂ: ದೇಶದ ಎಲ್ಲಾ ಹೆದ್ದಾರಿಗಳಲ್ಲಿನ ಬಾರ್, ವೈನ್ ಶಾಪ್ ಬಂದ್…!