ಬ್ರಿಕ್ಸ್ ಸಮ್ಮೇಳನಕ್ಕೆ ಭಾಗವಹಿಸಲು ಬಂದಿದ್ದ ರಷ್ಯಾದ ಅಧ್ಯಕ್ಷ ವ್ಲಾಡಿಮರ್ ಪುಟಿನ್ ಇದ್ದ ವಿಮಾನ ಗೋವಾ ಬದಲಿಗೆ ಬೆಂಗಳೂರಿನಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಘಟನೆ ನಡೆದಿದೆ. ಶನಿವಾರದಿಂದ ಗೋವಾದಲ್ಲಿ ನಡೆಯಲಿರುವ 2 ದಿನಗಳ ಬ್ರಿಕ್ಸ್ ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಿದ್ದ ಪುಟಿನ್ ಅವರು ಗೋವಾದ ಪಣಜಿ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ಈ ವೇಳೆ ಹವಾಮಾನ ವೈಪರಿತ್ಯದ ಕಾರಣದಿಂದಾಗಿ ಪುಟಿನ್ ಅವರಿದ್ದ ವಿಶೇಷ ವಿಮಾನ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು ಎಂದು ಮೂಲಗಳಿಂದ ತಿಳಿದು ಬಂದಿದೆ. ಸುಮಾರು 15 ನಿಮಿಷಗಳ ಕಾಲ ಪುಟಿನ್ ಅವರ ವಿಮಾನ ಬೆಂಗಳೂರಿನಲ್ಲೆ ಇದ್ದು, ಆ ನಂತರ ಗೋವಾಕ್ಕೆ ಪ್ರಯಾಣ ಬೆಳೆಸಿದೆ. ಇಂದಿನಿಂದ ಗೋವಾದಲ್ಲಿ ಎರಡು ದಿನಗಳ ಕಾಲ ಬ್ರಿಕ್ಸ್ ಶೃಂಗ ಸಭೆ ನಡೆಯಲಿದ್ದು ಭಾರತದ ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ಸೇರಿದಂತೆ ಬ್ರೆಜಿಲ್, ಬಾಂಗ್ಲಾದೇಶ, ಚೀನಾ ಹಾಗೂ ದಕ್ಷಿಣ ಆಫ್ರಿಕಾ ದೇಶಗಳ ಪ್ರತಿನಿಧಿಗಳು ಪಾಲ್ಗೊಳ್ಳುತ್ತಿದ್ದಾರೆ..
Like us on Facebook The New India Times
POPULAR STORIES :
ವಿಶ್ವದಲ್ಲೇ ಅತೀ ಹೆಚ್ಚು ಸಂಬಳ ಪಡೆಯುವ ಪ್ರಧಾನಿ ಯಾರು ಗೊತ್ತಾ..?
ಹೌದು ಸ್ವಾಮಿ.. ಪ್ರಥಮ್‍ಗೆ ಬಿಗ್‍ಬಾಸ್ ಕರ್ದೇ ಇರ್ಲಿಲ್ವಂತೆ..!
ಹತ್ತು ರೂ ಜಗಳಕ್ಕೆ ಏಳು ವರ್ಷ ಸಜೆ..!