ACB ರದ್ದು : ಸಂತೋಷ್ ಹೆಗಡೆ ಹೇಳಿದ್ದೇನು ?

Date:

ACB ರದ್ದುಗೊಳಿಸಿ ಲೋಕಾಯುಕ್ತ ಪುನರ್ ಜಾರಿಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಿವೃತ್ತ ಲೋಕಾಯುಕ್ತ N.ಸಂತೋಷ್ ಹೆಗಡೆ ಪ್ರತಿಕ್ರಿಯೆ ನೀಡಿದ್ದಾರೆ . ಈ ಬಗ್ಗೆ ಮಾತನಾಡಿದ ಅವರು ಇದು ಸ್ವಾಗತಾರ್ಹ ಬೆಳವಣಿಗೆ ಎಂದಿದ್ದಾರೆ .

ಮೈಸೂರಿನಲ್ಲಿ ಹೇಳಿಕೆ ನೀಡಿರುವ ನಿವೃತ್ತ ಲೋಕಾಯುಕ್ತ N.ಸಂತೋಷ್ ಹೆಗಡೆ ಅವರು
” ಲೋಕಾಯುಕ್ತ ಜಾರಿಗೆ ತಂದಿದ್ದನ್ನ ಪ್ರಶ್ನಿಸಿ ಒಬ್ಬರು ಸುಪ್ರೀಂ ಮೊರೆ ಹೋಗಲಾಗಿತ್ತು . ಆದ್ರೆ, ACB ರದ್ದುಗೊಳಿಸಿದ ಸರ್ಕಾರದ ನಿರ್ಧಾರವನ್ನ ಸುಪ್ರೀಂ ಎತ್ತಿ ಹಿಡಿದಿದೆ ‌ . ಹಾಗಾಗಿ ಲೋಕಾಯುಕ್ತಕ್ಕೆ ಬಲ ತುಂಬುವ ಕೆಲಸವನ್ನ ಸರ್ಕಾರ ಮಾಡಬೇಕಿದೆ
ಲೋಕಾಯುಕ್ತ ಕೇಳುವ ಸಿಬ್ಬಂದಿಯನ್ನು ಸರ್ಕಾರ ನೇಮಕ ಮಾಡಬೇಕು ‌ . ಭ್ರಷ್ಟಾಚಾರದ ವಿರುದ್ಧ ಹೋರಾಡುವ ಸಾಮರ್ಥ್ಯ ಲೋಕಾಯುಕ್ತಕ್ಕೆ ಇದೆ‌ . ಖಾಸಗಿ ವ್ಯಕ್ತಿಗಿಂತ, ಸರ್ಕಾರದಲ್ಲಿ ಲಂಚ ಸ್ವೀಕರಿಸುವವರ ವಿರುದ್ಧ ಕ್ರಮ ಆಗಬೇಕು .ಇದಕ್ಕಾಗಿ ಲೋಕಾಯುಕ್ತ ಕಾಯ್ದೆಯ ಕೆಲವು ನಿಯಮಗಳು ಬದಲಾಗಬೇಕಿದೆ .
ಲೋಕಾಯುಕ್ತ ಬಲಪಡಿಸಲು ಎಲ್ಲಾ ರೀತಿಯ ಅವಕಾಶಗಳು ಇವೆ. ಸರ್ಕಾರಕ್ಕೂ ಸಮಯಾವಕಾಶದ ಅಗತ್ಯವಿದೆ, ಕಾಲಾವಕಾಶ ಕೊಟ್ಟು ನೋಡೋಣ ” ಎಂದರು .

ಭ್ರಷ್ಟಾಚಾರ ಮೊದಲಿಂದಲೂ ಇದೆ. ಆದ್ರೆ, ಇತ್ತೀಚೆಗೆ ಮಿತಿ ಮೀರಿದೆ . ಸಮಾಜದ ವಿವಿಧ ವಲಯಗಳಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ .
ಅತಿಯಾದ ದುರಾಸೆಯಿಂದಾಗಿ ಭ್ರಷ್ಟಾಚಾರ ಎಲ್ಲೆಡೆ ಹೆಚ್ಚುತ್ತಿದೆ‌ .  ದುರಾಸೆ ಮೊದಲೂ ಇತ್ತು. ಆದ್ರೆ, ಈಗ ಇನ್ನಷ್ಟು ಜಾಸ್ತಿಯಾಗಿದೆ . ಮೈಸೂರಿನಲ್ಲಿ ನಿವೃತ್ತ ಲೋಕಾಯುಕ್ತ N.ಸಂತೋಷ್ ಹೆಗಡೆ ಹೇಳಿಕೆ ನೀಡಿದ್ದಾರೆ  .

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...