ಸರಳ ವಾಸ್ತು ಕಾರ್ಯಕ್ರಮದ ಮೂಲಕ ಮನೆ ಮಾತಾಗಿದ್ದ ಚಂದ್ರಶೇಖರ್ ಗುರೂಜಿಯನ್ನು ಹುಬ್ಬಳ್ಳಿಯಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಚಂದ್ರಶೇಖರ್ ಗುರೂಜಿ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಾಗಲಕೋಟೆ ಮೂಲದ ಮಂಜುನಾಥ್ ಹಾಗೂ ಗುರೂಜಿಯ ಆಪ್ತನಾಗಿದ್ದ ಮಹಂತೇಶ್ ಶಿರೂರ ಬಂಧಿತ ಆರೋಪಿಗಳು.
ಕೊಲೆ ಬಳಿಕ ಬೆಳಗಾವಿ ರಾಮದುರ್ಗದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಡಿಎಸ್ಪಿ ರಾಮನಗೌಡ ಹಟ್ಟಿ ನೇತೃತ್ವದ ತಂಡ ಕೊಲೆ ನಡೆದ ನಾಲ್ಕೇ ಗಂಟೆಗಳಲ್ಲಿ ಬಂಧಿಸಿದ್ದಾರೆ. ಬಂಧಿತರೊಬ್ಬರು ಚಂದ್ರಶೇಖರ್ ಗುರೂಜಿ ಅವರ ಬಳಿ ಕೆಲಸ ಮಾಡುತ್ತಿದ್ರು ಆರೋಪಿ ಮಂಜುನಾಥ್ ಚಂದ್ರಶೇಖರ್ ಅವರ ಬಳಿ ಮ್ಯಾನೆಜರ್ ಆಗಿ ಕೆಲಸ ಮಾಡುತ್ತಿದ ಹಾಗೂ ಮಹಾಂತೇಶ್ ಟೀಮ್ ಹೆಡ್ ಆಗಿ ಕೆಲಸ ಮಾಡುತ್ತಿದ್ದ. ಸದ್ಯ ಇಬ್ಬರು ಪೊಲೀಸರು ಬಂಧಿಸಿದ್ದು ಯಾವ ಕಾರಣಕ್ಕೆ ಈ ಕೃತ್ಯ ಎಸಗಿದಿದ್ದಾರೆ ಎಂಬುದು ತನಿಖೆಯಲ್ಲಿ ತಿಳಿಯಬೇಕಿದೆ