ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ ಸಿಎಂ ಸೂಚನೆ

Date:

ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗಾಗಿ ಸಿಎಂ ಬೊಮ್ಮಾಯಿ ಅವರು ದೇವಸ್ಥಾನದ ಆಡಳಿತ ಮಂಡಳಿ ಜೊತೆ ಸಭೆ ನಡೆಸಿದರು. ದೇವಸ್ಥಾನದ ಅಭಿವೃದ್ಧಿ ಸಂಬಂಧ ವಿಧಾನಸೌಧದ ಮುಖ್ಯಮಂತ್ರಿ ಕೊಠಡಿಯಲ್ಲಿ ಸಭೆ ನಡೆದಿದ್ದು, ಅಂದಾಜು 26 ಕೋಟಿ ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿಗೆ ಚಿಂತನೆ ನಡೆಸಿದ್ದಾರೆ.

 

ಸಭೆಯಲ್ಲಿ ಕೆಲ ಸಲಹೆ ಸೂಚನೆ ನೀಡಿರುವ ಮುಖ್ಯಮಂತ್ರಿಗಳು ಸದ್ಯ ವಾಸ್ತವ್ಯಕ್ಕೆ 400 ಕೊಠಡಿಗಳಿದ್ದು,ಇನ್ನೂ 200 ಕೊಠಡಿ ಹೆಚ್ಚಿಸಿ, ವಸತಿ ಸಮುದಾಯದಗಳ ಕೆಳಗೆ ಅನ್ನದಾಸೋಹ ಕೇಂದ್ರ ತೆರೆಯಿರಿ. ಸ್ನಾನಗೃಹ, ಶೌಚ ಗೃಹ ನಿರ್ಮಾಣ ಮಾಡಿ. ದೇವಸ್ಥಾನದಲ್ಲಿ 2 ಪ್ರತ್ಯೇಕ ಸರತಿ ಸಾಲು ನಿರ್ಮಾಣ ಮಾಡಿ.

ಅದರಲ್ಲಿ ಒಂದು ವಿಶೇಷ ದರ್ಶನಕ್ಕೆ ಸರತಿ ಸಾಲಿಗೆ ಅವಕಾಶ ಮಾಡಿಕೊಡಿ ಎಂದು ಸೂಚಿಸಿದ್ದಾರೆ. ಫುಟ್‌ಪಾತ್ ಅಭಿವೃದ್ಧಿಗೆ ಕ್ರಮ ಕೈಗೊಳ್ಳಿ. ದೇವಸ್ಥಾನದ ಸುತ್ತಲಿನ 3 ಜಾಗಗಳಲ್ಲಿ ಪಾರ್ಕಿಂಗೆ ವ್ಯವಸ್ಥೆ ಮಾಡಿ. ವ್ಯಾಪಾರಿಗಳಿಗೆ ಅಂಗಡಿ ತೆರೆಯಲು ಸ್ಥಳಾವಕಾಶ ಮಾಡಿಕೊಡಿ. ದೇವಸ್ಥಾನದ ಸ್ವಚ್ಛತೆಗೆ ಗುತ್ತಿಗೆ ಆಧಾರದಲ್ಲಿ ಕಾರ್ಮಿಕರ ನೇಮಕ ಮಾಡಿ ಎಂದು ಸೂಚಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...