SBI ಬ್ಯಾಂಕಿನಲ್ಲಿ 2056 ಹುದ್ದೆ ಖಾಲಿ; ಅರ್ಜಿ ಹಾಕಿ

0
74

ಬೆಂಗಳೂರು, ಅಕ್ಟೋಬರ್ 05; ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) Probationary Officer ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಅಕ್ಟೋಬರ್ 25 ಕೊನೆಯ ದಿನವಾಗಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಒಟ್ಟು 2056 Probationary Officer ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಎಸ್‌ಬಿಐ ನೇಮಕಾತಿ ನಿಯಮಗಳ ಅನ್ವಯ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು. ನೇಮಕಾತಿ ನಿಯಮಗಳ ಅನ್ವಯ ವೇತನವನ್ನು ನಿಗದಿ ಮಾಡಲಾಗಿದೆ.

 

ಎಸ್‌ಬಿಐ ನೇಮಕಾತಿ ನಿಯಮಗಳ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ ವಯೋಮಿತಿ 21 ವರ್ಷ. ಏಪ್ರಿಲ್ 1, 2021ಕ್ಕೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿ 30 ವರ್ಷಗಳು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷದ ವಯೋಮಿತಿ ಸಡಿಲಿಕೆ ಇದೆ.

 

ಅರ್ಜಿಗಳನ್ನು ಸಲ್ಲಿಕೆ ಮಾಡುವ ಸಾಮಾನ್ಯ/ ಒಬಿಸಿ ವರ್ಗದ ಅಭ್ಯರ್ಥಿಗಳು 750 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ. ಎಸ್‌ಸಿ/ ಎಸ್‌ಟಿ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಆಸಕ್ತ ಅಭ್ಯರ್ಥಿಗಳು sbi.co.in ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಕೆ ಮಾಡುವಾಗ ಮುಂದಿನ ಸಂಪರ್ಕಕ್ಕಾಗಿ ಸರಿಯಾದ ಇ-ಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲ ಲಿಖಿತ ಪರೀಕ್ಷೆ ಆನ್‌ಲೈನ್ ಮೂಲಕ ನವೆಂಬರ್/ ಡಿಸೆಂಬರ್‌ನಲ್ಲಿ ನಡೆಸಲಾಗುತ್ತದೆ. ಡಿಸೆಂಬರ್‌ನಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಆನ್‌ಲೈನ್ ಮೂಲಕ ಮುಖ್ಯ ಪರೀಕ್ಷೆ ಡಿಸೆಂಬರ್‌ನಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here