ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಶಾಂತಿನಗರ ಶಾಸಕ ಎನ್ ಎ ಹ್ಯಾರೀಸ್ ಅವರ ಪುತ್ರ ನಲಪಾಡ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶನಿವಾರ ರಾತ್ರಿ ಯುಬಿಸಿಟಿ ರೆಸ್ಟೋರೆಂಟ್ ನಲ್ಲಿ ನಲಪಾಡ್ ಮತ್ತವನ ಸ್ನೇಹಿತರು ವಿದ್ವತ್ ಎಂಬ ವಿದ್ಯಾರ್ಥಿ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ್ದರು.
ಮಾರಣಾಂತಿಕ ಹಲ್ಲೆಗೊಳಗಾದ ವಿದ್ವತ್ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಲಪಾಡ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.