ಎಐಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಚಿನ್ನಮ್ಮ ಶಶಿಕಲಾ ಅವಿರೋಧ ಆಯ್ಕೆ

Date:

ತಮಿಳುನಾಡಿನ ಅಮ್ಮಾ ಜೆ. ಜಯಲಲಿತಾ ನಿಧನ ನಂತರ ಆ ಸ್ಥಾನವನ್ನು ತುಂಬಲು ಚಿನ್ನಮ್ಮ ರೆಡಿಯಾಗಿದ್ದಾರೆ. ಇಂದು ನಡೆದ ಸಭೆಯಲ್ಲಿ ಎಐಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಶಶಿಕಲಾ ನಟರಾಜನ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಇಂದು ಬೆಳಿಗ್ಗೆ ಸ್ಥಾಯಿ ಸಮಿತಿ ಅಧ್ಯಕ್ಷ ಮಧುಸೂಧನ್ ಹಾಗೂ ಹಿರಿಯ ನಾಗರೀಕರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಮಂಡಳಿ ಸಭೆಯಲ್ಲಿ ಶಶಿಕಲಾ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲು ಮುಖಂಡರೆಲ್ಲರೂ ಒಕ್ಕೊರಲಿನಿಂದ ಸಮ್ಮತಿ ನೀಡಿದ್ದಾರೆ. ಕಳೆದ 33 ವರ್ಷಗಳಿಂದ ಪುರಚ್ಚಿ ತಲೈವಿ ಜಯಲಲಿತಾ ಅವರ ಜೊತೆ ಆಪ್ತ ಸಂಬಂಧ ಬೆಳೆಸಿಕೊಂಡಿದ್ದ ಶಶಿಕಲಾ ಅವರಿಗೆ ರಾಜಕೀಯ ವಲಯದಲ್ಲಿ ಬಹುದೊಡ್ಡ ಅನುಭವ ಹೊಂದಿದವರು. ಹೀಗಾಗಿ ಇವರು ಪಕ್ಷದ ಎಲ್ಲಾ ಜವಾಬ್ದಾರಿಯನ್ನು ನಿಭಾಯಿಸೋ ಶಕ್ತಿ ಅವರಲ್ಲಿದೆ ಎನ್ನುತ್ತಾರೆ ಪಕ್ಷದ ಮುಖಂಡರು. ಮಾಜಿ ಮುಖ್ಯ ಮಂತ್ರಿ ಎಂಜಿಆರ್ ನಿಧನ ನಂತರ ಜಯಲಲಿತಾ ಅವರು ಎಂಜಿಆರ್ ಬಿಟ್ಟ ಎಲ್ಲಾ ಜವಾಬ್ದಾರಿಯನ್ನು ನಿಭಾಯಿಸಿದ್ದರು. ಈಗ ಜಯಲಲಿತಾ ಅವರ ಜವಾಬ್ದಾರಿಯನ್ನು ಶಶಿಕಲಾ ವಹಿಸಿಕೊಳ್ಳಲಿದ್ದಾರೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.
ಇನ್ನು ಶಶಿಕಲಾ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿದ್ದಲ್ಲದೆ ಸಭೆಯಲ್ಲಿ ಒಟ್ಟು 14 ಮಹತ್ವದ ನಿರ್ಣಯಗಳಿಗೆ ಅಂಗೀಕಾರ ದೊರೆಯಿತು. ಜಯಾ ನಿಧನದ ದಿನದಂದು ರಾಷ್ಟ್ರೀಯ ರೈತ ದಿನವನ್ನಾಗಿ ಆಚರಿಸಬೇಕು, ಜಯಾ ಅವರಿಗೆ ಮಾಗ್ಸಸ್ಸೆ ಪ್ರಶಸ್ತಿ ನೀಡುವುದಲ್ಲದೆ ಭಾರತದ ಅತ್ಯುನ್ನತ ಪ್ರಶಸ್ತಿಗಳಲ್ಲೊಂದಾದ ಭಾರತ ರತ್ನ ನೀಡಿ ಗೌರವಿಸಬೇಕು ಹಾಗೂ ನೊಬೆಲ್ ಪ್ರಶಸ್ತಿ ನೀಡಬೇಕು ಎಂಬಿತ್ಯಾದಿ ನಿರ್ಣಯಗಳು ಒಳಗೊಂಡಿದೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಈ ವಾರ ಯಾರೂ ಪ್ರಥಮ್‍ನ ನಾಮಿನೇಟ್ ಮಾಡಲಿಲ್ಲ ಯಾಕೆ ಗೊತ್ತಾ.? ಇದರ ಹಿಂದಿನ ರಹಸ್ಯ ಬಯಲು.!!!

ಹಗಲಿನಲ್ಲಿ ಟಾಪ್ ಸಾಫ್ಟ್ ವೇರ್ ಇಂಜಿನಿಯರ್.! ರಾತ್ರಿ ಆದ್ರೆ ಸೀರೆ ಧರಿಸುವ ಗಂಡ..!

ಉಪೇಂದ್ರ ಹಾಗೂ ಯಶ್ ಬಗ್ಗೆ ಹಂಸಲೇಖ ಹೇಳಿದ್ದಾದ್ರೂ ಏನು..?

ನಿನ್ನ ಬರುವಿಕೆಯ ನಿರೀಕ್ಷೆಯಲ್ಲಿ ಈ ಪುಟ್ಟ ಹೃದಯ…!! Real Love Story

ಜನವರಿಯಿಂದ ಜಿಯೋ ಫ್ರೀ ಇಂಟರ್‍ನೆಟ್ ಕ್ಯಾನ್ಸಲ್..?!!

ಬ್ಯಾಂಕ್ ಜೊತೆ ಬ್ಯುಸಿನೆಸ್ ಮಾಡಲು ಅವಕಾಶ, ಪ್ರತಿ ತಿಂಗಳು 30,000 ತನಕ ಆದಾಯ

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...