ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಟಗರು ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ.
ಶಿವಣ್ಣ ಹೊಸ ಸಿನಿಮಾ ‘ಕವಚ’ ಚಿತ್ರೀಕರಣದಲ್ಲಿ ಬ್ಯುಸಿ ಇದ್ದಾರೆ. ಇದರ ಬೆನ್ನಲ್ಲೇ ತೆರೆಮರೆಯಲ್ಲಿ ಮತ್ತೊಂದು ಸಿನಿಮಾಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ.

ಕವಚ ನಂತರ ಶಿವಣ್ಣ ನಟಿಸುವ ಚಿತ್ರ ರಸ್ತುಂ. ಜಯಣ್ಣ ಕಂಬೈನ್ಸ್ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಇಲ್ಲಿಯವರೆ ಸ್ಟಂಟ್ ಮಾಸ್ಟರ್ ಆಗಿ ಗುರುತಿಸಿಕೊಂಡಿದ್ದ ರವಿವರ್ಮಾ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಮೂಲಕ ರವಿವರ್ಮಾ ನಿರ್ದೇಶಕರಾಗಿ ಹೊಸ ಪಯಣ ಆರಂಭಿಸುತ್ತಿದ್ದಾರೆ. ಚಿತ್ರದ ಬಹುತೇಕ ಸ್ಕ್ರಿಪ್ಟ್ ವರ್ಕ್ ಮುಗಿದಿದೆ.

ಅಂದಹಾಗೆ ಈ ಚಿತ್ರದ ನಾಯಕಿ ಯಾರು ಗೊತ್ತಾ? ಯೂಟರ್ನ್ ಸಿನಿಮಾದ ನಾಯಕಿ ಶ್ರದ್ಧಾ ಶ್ರೀನಾಥ್ ಶಿವಣ್ಣಗೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಾರಂತೆ. ಇನ್ನೂ ಕನ್ಫರ್ಮ್ ಆಗಿಲ್ಲ. ಏಪ್ರಿಲ್ 24ರಂದು ಡಾ ರಾಜ್ ಕುಮಾರ್ ಹುಟ್ಟುಹಬ್ಬದ ದಿನದಂದು ಚಿತ್ರೀಕರಣಕ್ಕೆ ಚಾಲನೆ ನೀಡಲು ಚಿತ್ರತಂಡ ಉದ್ದೇಶಿಸಿದೆ.








