No menu items!
15.4 C
Munich
Thursday, August 13, 2026

ಲಿಂಗೈಕ್ಯ ಶ್ರೀ ಶಿವಕುಮಾರ ಶ್ರೀಗಳ 118ನೇ ಜನ್ಮದಿನೋತ್ಸವ: ಸಚಿವ ರಾಜನಾಥ್ ಸಿಂಗ್ ಭಾಗಿ

Must read

ಲಿಂಗೈಕ್ಯ ಶ್ರೀ ಶಿವಕುಮಾರ ಶ್ರೀಗಳ 118ನೇ ಜನ್ಮದಿನೋತ್ಸವ: ಸಚಿವ ರಾಜನಾಥ್ ಸಿಂಗ್ ಭಾಗಿ

ತುಮಕೂರು: ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಲಿಂಗೈಕ್ಯ ಶ್ರೀ ಶಿವಕುಮಾರ ಶ್ರೀಗಳ 118ನೇ ಜನ್ಮ ದಿನ ಹಿನ್ನೆಲೆ ಇಂದು ಮುಂಜಾನೆಯಿಂದಲೇ ಶ್ರೀಗಳ ಗದ್ದುಗೆಯಲ್ಲಿ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳ ನೇತೃತ್ವದಲ್ಲಿ ಮಂತ್ರ ಘೋಷಗಳೊಂದಿಗೆ ಪೂಜೆ ಕಾರ್ಯಗಳು ನೆರೆವೇರುತ್ತಿವೆ.
ಪೂಜೆಯಲ್ಲಿ ವಿವಿಧ ಮಠಾಧಿಪತಿಗಳು ಭಾಗಿಯಾಗಿದ್ದಾರೆ. ಇಂದು ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾಗಿಯಾಗಲಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಕೇಂದ್ರ ಸಚಿವ ವಿ.ಸೋಮಣ್ಣ, ಸುತ್ತೂರು ಶ್ರೀಗಳು ಸೇರಿ ಹಲವರು ಉಪಸ್ಥಿತರಿರಲಿದ್ದಾರೆ.

- Advertisement -spot_img

More articles

- Advertisement -spot_img

Latest article