No menu items!
19.8 C
Munich
Saturday, April 18, 2026

ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡ ಶ್ರೀರಾಮುಲು

Must read

ಸಾರಿಗೆ ನಿಗಮಗಳ ಸೋರಿಕೆ ತಪ್ಪಿಸಿ ಲಾಭದತ್ತ ಕೊಂಡೊಯ್ಯದಿದ್ದರೆ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಶಿಸ್ತುಕ್ರಮ ಜರುಗಿಸುವುದಾಗಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಬಿಎಂಟಿಸಿ, ವಾಯುವ್ಯ, ಕಲ್ಯಾಣ ಕರ್ನಾಟಕ ಹಾಗೂ ಕೆಎಸ್‍ಆರ್‍ಟಿಸಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು ಸೋರಿಕೆ ಹಾಗೂ ನಷ್ಟ ತಡೆಗಟ್ಟುವ ಕುರಿತು ಕೆಲವು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸೂಚಿಸಿದರು. ಸಾರಿಗೆ ಸಂಸ್ಥೆ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ. ನಾಲ್ಕು ನಿಗಮಗಳಲ್ಲಿ ನೌಕರರಿಗೆ ತಿಂಗಳ ವೇತನ ನೀಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಸ್ಥೆಗೆ ಪದೇ ಪದೇ ನಷ್ಟ ಉಂಟಾದರೆ ನಿರ್ವಹಣೆ ಮಾಡುವುದು ಹೇಗೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೋವಿಡ್ ಸಂದರ್ಭದಲ್ಲಿ ನಾವು ಬಸ್‍ಗಳನ್ನು ಕಾರ್ಯಾಚರಣೆ ನಡೆಸಲು ಸಾಧ್ಯವಾಗಲಿಲ್ಲ. ನೌಕರರಿಗೆ ಸಂಬಳವನ್ನು ನೀಡಲು ಸಾಧ್ಯವಾಗಿರಲಿಲ್ಲ. ಮಾನವೀಯತೆ ದೃಷ್ಟಿಯಿಂದ ನಾವು ವೇತನವನ್ನು ನೀಡಿದ್ದೇವೆ. ಆದರೆ ಸಂಸ್ಥೆಗೆ ಮಾತ್ರ ನಷ್ಟ ಹಾಗೂ ಸೋರಿಕೆ ನಿಂತಿಲ್ಲ ಎಂದು ಶ್ರೀರಾಮುಲು ಅಸಮಾಧಾನ ಹೊರಹಾಕಿದರು. ಪ್ರತಿ ಸಭೆಯಲ್ಲೂ ಒಂದಿಲ್ಲೊಂದು ಸಬೂಬುಗಳನ್ನು ಹೇಳುತ್ತಲೇ ಬಂದಿದ್ದೀರಿ. ಇನ್ನು ಮುಂದೆ ಇಂತಹ ಕಾರಣಗಳನ್ನು ಒಪ್ಪುವುದಿಲ್ಲ. ಕೂಡಲೇ ಸೋರಿಕೆ ಹಾಗೂ ನಷ್ಟವನ್ನು ತಡೆಗಟ್ಟಿ ಎಲ್ಲ ನಿಗಮಗಳನ್ನು ಲಾಭದತ್ತ ಮುನ್ನಡೆಯಬೇಕು. ಇದಕ್ಕೆ ಬೇಕಾದ ಸುಧಾರಣೆ ಕ್ರಮಗಳನ್ನು ನೀವೇ ತೆಗೆದುಕೊಳ್ಳಬೇಕೆಂದು ಸೂಚಿಸಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article