ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಗೌರವ ಡಾಕ್ಟರೇಟ್ ಕೊಡುವಂತೆ ಮೈಸೂರು ವಿಶ್ವವಿದ್ಯಾಲಯಕ್ಕೆ ಸಿಂಡಿಕೇಟ್ ಸದಸ್ಯರೊಬ್ಬರು ಶಿಫಾರಸ್ಸು ಮಾಡಿದ್ದಾರೆ. ವಿವಿಯ ಸಿಂಡಿಕೇಟ್ ಸದಸ್ಯ ಎಂ.ಎಸ್. ಎಸ್. ಕುಮಾರ್ ಈ ಕುರಿತು ಕುಲಪತಿಗಳಿಗೆ ಪತ್ರ ಬರೆದಿದ್ದಾರೆ.
ಸಮಾಜಸೇವೆ ಸಲ್ಲಿಸಿದ ಗಣ್ಯರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತದೆ. ಮೈಸೂರುನಿವರರಾದ ಸಿಧ್ಧರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯಾಗಿ ಒಳ್ಳೆಯ ಆಡಳಿತ ನೀಡಿದ್ದಾರೆ. ಅನೇಕ ಜನಪರ ಕೆಲಸಗಳನ್ನು ಮಾಡಿದ್ದಾರೆ. ಹೀಗಾಗಿ 2018 ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇತ್ ಪ್ರಧಾನ ಮಾಡಬೇಕು ಎಂದು ಅವರು ಪತ್ರ ಬರೆದಿದ್ದಾರೆ.