ಹಿಂದಿ ಕಿರುತೆರೆ ನಟ ಸಿದ್ಧಾರ್ಥ್ ಶುಕ್ಲಾ ಅವರ ಕಾರು ಅಪಘಾತಕ್ಕೀಡಾಗಿದ್ದು, ಮೂವರಿಗೆ ಗಾಯವಾಗಿದೆ.
ಮುಂಬೈನ ಓಶಿವಾರಾ ಎಂಬಲ್ಲಿ ಘಟನೆ ನಡೆದಿದ್ದು, ಆರೋಪಿ ಸಿದ್ಧಾರ್ಥ್ ಶುಕ್ಲಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಸಿದ್ಧಾರ್ಥ ಶುಕ್ಲಾ ತಮ್ಮ ಬಿಎಂಡಬ್ಲ್ಯೂ x5 ಸ್ಪೋರ್ಟ್ಸ್ ಕಾರನ್ನು ಡ್ರೈವ್ ಮಾಡಿ ಕೊಂಡು ಬರುವಾಗ, ಮೂರು ಕಾರ್‌ಗಳಿಗೆ ಡಿಕ್ಕಿ ಹೊಡೆದಿದ್ದು, ಸಿದ್ಧಾರ್ಥ ವೇಗವಾಗಿ ಚಾಲನೆ ಮಾಡಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಇನ್ನು ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಸಿದ್ಧಾರ್ಥ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆಸಿದ್ದಾರೆ.