ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಅನಾರೋಗ್ಯ ಹಿನ್ನೆಲೆ ಮೈಸೂರಿನಲ್ಲಿ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ. ನಗರದ 101 ಗಣಪತಿ ದೇಗುಲದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.
ಮಾಜಿ ಸಿಎಂ ಸಿದ್ದರಾಮಯ್ಯರ ಆರೋಗ್ಯ ಬೇಗ ಚೇತರಿಕೆಯಾಗಲಿ,
ಆರೋಗ್ಯವಾಗಿ ಆಸ್ಪತ್ರೆಯಿಂದ ಹಿಂದಿರುಗಲಿ ಎಂದು ಅಭಿಮಾನಿಗಳು ಪೂಜೆ ಸಲ್ಲಿಸಿದ್ರು. ಮುಂದಿನ ಸಿಎಂ ಆಗಿ ಸಿದ್ದರಾಮಯ್ಯರ ನೋಡುವ ಬಯಕೆಯಲ್ಲಿದ್ದು, ಆದಷ್ಟು ಬೇಗ ಅವರು ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ.