No menu items!
20.1 C
Munich
Monday, July 6, 2026

SIRಗೆ ನಮ್ಮ ವಿರೋಧ ಇದೆ, ಆದರೆ ಮತದಾನದ ಹಕ್ಕು ರಕ್ಷಣೆ ನಮ್ಮ ಜವಾಬ್ದಾರಿ’; ಬಿಜೆಪಿ ನಾಯಕರಿಗೆ ಡಿಕೆ ಶಿವಕುಮಾರ್ ತಿರುಗೇಟು

Must read

SIRಗೆ ನಮ್ಮ ವಿರೋಧ ಇದೆ, ಆದರೆ ಮತದಾನದ ಹಕ್ಕು ರಕ್ಷಣೆ ನಮ್ಮ ಜವಾಬ್ದಾರಿ’; ಬಿಜೆಪಿ ನಾಯಕರಿಗೆ ಡಿಕೆ ಶಿವಕುಮಾರ್ ತಿರುಗೇಟು

ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಕುರಿತು ರಾಜ್ಯ ಸರ್ಕಾರದ ನಿಲುವನ್ನು ಪುನರುಚ್ಚರಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಈ ಪ್ರಕ್ರಿಯೆಗೆ ಸರ್ಕಾರದ ವಿರೋಧವಿದ್ದರೂ ಜನರ ಮತದಾನದ ಹಕ್ಕು ರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಇದೇ ವೇಳೆ, ಬಡವರು ಹಾಗೂ ಅಲ್ಪಸಂಖ್ಯಾತರ ಮತದಾನದ ಹಕ್ಕು ಕಸಿಯಲು ವಿರೋಧ ಪಕ್ಷಗಳು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.
ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಸ್ಐಆರ್ ಪ್ರಕ್ರಿಯೆ ಸಂಪೂರ್ಣವಾಗಿ ಚುನಾವಣಾ ಆಯೋಗದ ವ್ಯಾಪ್ತಿಗೆ ಸೇರಿದ್ದು, ಇದರಲ್ಲಿ ರಾಜ್ಯ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಎಸ್ಐಆರ್ ವಿಚಾರವಾಗಿ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಹಾಗೂ ಪ್ರಹ್ಲಾದ್ ಜೋಶಿ ಅವರು ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿರುವ ಕುರಿತು ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ಈ ಪ್ರಕ್ರಿಯೆಯ ವೇಳಾಪಟ್ಟಿಯ ಕುರಿತು ಸರ್ಕಾರಕ್ಕೆ ಅಸಮಾಧಾನವಿದ್ದು, ಈ ಸಂಬಂಧ ನ್ಯಾಯಾಲಯದ ಮೊರೆ ಹೋಗುವುದಾಗಿ ತಿಳಿಸಿದರು.
“ನಾವು ಜನರ ಮತದಾನದ ಹಕ್ಕು ರಕ್ಷಿಸಬೇಕು ಎಂಬ ಉದ್ದೇಶದಿಂದಲೇ ಚುನಾವಣಾ ಆಯೋಗದೊಂದಿಗೆ ಸಹಕಾರ ನೀಡುತ್ತಿದ್ದೇವೆ. ದೇಶದ ಇತರ ಯಾವುದೇ ರಾಜ್ಯದಲ್ಲಿ ಈ ರೀತಿ ಸರ್ಕಾರದಿಂದ ಸಹಕಾರ ನೀಡಿಲ್ಲ. ‘ನಿಮ್ಮ ಮತದಾನದ ಹಕ್ಕು, ನಿಮ್ಮ ಬದುಕಿನ ಹಕ್ಕು’ ಎಂಬ ಸಂದೇಶದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ” ಎಂದು ಹೇಳಿದರು.
ಚುನಾವಣಾ ಆಯೋಗದ ನಿಯಮಗಳ ಪ್ರಕಾರ ಎಲ್ಲ ರಾಜಕೀಯ ಪಕ್ಷಗಳಿಗೂ ಬಿಎಲ್ಎ-2 (Booth Level Agent) ನೇಮಕಕ್ಕೆ ಅವಕಾಶವಿದ್ದು, ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಸೇರಿದಂತೆ ಎಲ್ಲ ಪಕ್ಷಗಳು ತಮ್ಮ ಪ್ರತಿನಿಧಿಗಳನ್ನು ನೇಮಿಸಿವೆ. ಸಂಘ-ಸಂಸ್ಥೆಗಳಿಗೂ ಸಹಕಾರ ನೀಡಲು ಅವಕಾಶ ಕಲ್ಪಿಸಲಾಗಿದೆ. ಅಧಿಕಾರಿಗಳು ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದರು.
“ಸರ್ಕಾರ ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದನ್ನು ನೋಡಿ ವಿರೋಧ ಪಕ್ಷಗಳಿಗೆ ಭಯ ಶುರುವಾಗಿದೆ. ಚುನಾವಣಾ ಆಯೋಗದ ಮೇಲೆಯೇ ಅವರಿಗೆ ನಂಬಿಕೆ ಇಲ್ಲದಂತಾಗಿದೆ. ಈ ಪ್ರಕ್ರಿಯೆಯನ್ನು ರದ್ದು ಮಾಡಬೇಕು ಎನ್ನುವುದು ಚುನಾವಣಾ ಆಯೋಗದ ವ್ಯಾಪ್ತಿಯ ವಿಷಯ” ಎಂದು ಹೇಳಿದರು.
ರಾಜ್ಯದಲ್ಲಿ ಸುಮಾರು 4.50 ಕೋಟಿ ಜನರು ಜಾತಿ ಪ್ರಮಾಣಪತ್ರ ಪಡೆದಿದ್ದು, ಅವುಗಳನ್ನು ಆನ್ಲೈನ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ನಿವಾಸ ದೃಢೀಕರಣ ಪತ್ರ ನೀಡುವ ಅಧಿಕಾರವನ್ನು ಉಪ ತಹಶೀಲ್ದಾರರಿಗೆ ನೀಡಲಾಗಿದೆ. 2002ರ ಮತದಾರರ ಪಟ್ಟಿಯ ದಾಖಲೆಗಳು ಯಾರ ಬಳಿಯೂ ಇಲ್ಲದ ಕಾರಣ ಅವನ್ನೂ ಡಿಜಿಟಲ್ ರೂಪದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

- Advertisement -spot_img

More articles

- Advertisement -spot_img

Latest article