ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಚಿತ್ರದ ನಿರೀಕ್ಷೆ ಹೆಚ್ಚಿದೆ. ಇದೇ ಜುಲೈ 28ಕ್ಕೆ ಕಿಚ್ಚನ ಸಿನಿಮಾ ರಿಲೀಸ್ ಆಗುತ್ತಿದೆ. ಚಿತ್ರತಂಡದಿಂದ ಅಭಿಮಾನಿಗಳಿಗೆ ಹೊಸ ಅಪ್‌ಡೇಟ್ ಸಿಕ್ಕಿದೆ. `ವಿಕ್ರಾಂತ್ ರೋಣ ಚಿತ್ರದ ಹಿಂದಿಯಲ್ಲಿ ಸಲ್ಮಾನ್ ಖಾನ್ ವಿತರಣೆಯ ಜವಾಬ್ದಾರಿ ಹೊತ್ತಿದ್ದಾರೆ. ಈ ಮೂಲಕ ಕಿಚ್ಚನ ಸಿನಿಮಾಗೆ ಸಲ್ಮಾನ್ ಖಾನ್ ಸಾಥ್ ನೀಡಿದ್ದಾರೆ.
ವಿಕ್ರಾಂತ್ ರೋಣ ಸುದೀಪ್ ನಟನೆಯ ಸಿನಿಮಾದ ಕುರಿತು ಚಿತ್ರತಂಡ ಕೂಡ ಮೇ 16ರಂದು ಸೂಪರ್ ಅಪ್‌ಡೇಟ್ ಕೊಡುವುದಾಗಿ ಅನೌನ್ಸ್ ಮಾಡಿತ್ತು. ಈಗ ಆ ಗುಡ್ ನ್ಯೂಸ್ ರಿವೀಲ್ ಆಗಿದೆ. ವಿಕ್ರಾಂತ್ ರೋಣಗೆ ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಸಾಥ್ ನೀಡಿದ್ದಾರೆ. ಕಿಚ್ಚನ ಚಿತ್ರದ ಹಿಂದಿಯಲ್ಲಿ ವಿತರಣೆಯ ಜವಾಬ್ದಾರಿಯನ್ನು ಹೊತ್ತಿದ್ದಾರೆ.
ವಿಕ್ರಾಂತ್ ರೋಣ ಹಿಂದಿ ವರ್ಷನ್ ಅನ್ನು ಸಲ್ಮಾನ್ ಖಾನ್ ಪ್ರೆಸೆಂಟ್ ಮಾಡುತ್ತಿದ್ದಾರೆ. ಈ ಬಗ್ಗೆ ಚಿತ್ರತಂಡ ಕೂಡ ರಿವೀಲ್ ಮಾಡಿದ್ದು, ಸಲ್ಮಾನ್ ಖಾನ್ ಕೂಡ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಕಿಚ್ಚ ಸುದೀಪ್ ವಿಕ್ರಾಂತ್ ರೋಣ 3ಡಿ ಅವತರಣಿಕೆಯನ್ನು ಹಿಂದಿಯಲ್ಲಿ ಪ್ರೆಸೆಂಟ್ ಮಾಡುತ್ತಿರುವುದು ಸಂತೋಷವಾಗುತ್ತಿದೆ ಎಂದು ಹೇಳಿದ್ದಾರೆ.
View this post on Instagram