ಆಸ್ಪತ್ರೆಗೆ ದಾಖಲಾದ ಮಾಜಿ ಮುಖ್ಯಮಂತ್ರಿ ಎಸ್​.ಎಂ.ಕೃಷ್ಣ

Date:

ಮಾಜಿ ಮುಖ್ಯಮಂತ್ರಿ ಎಸ್​.ಎಂ.ಕೃಷ್ಣರು  ಅನಾರೋಗ್ಯದಿಂದ ಬಳಲುತ್ತಿದ್ದಾರೆ .  ತೀವ್ರ ಜ್ವರದಿಂದ ಬಳಲುತ್ತಿರುವ ಅವರನ್ನು ಮೊದಲು ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಜ್ವರ ಹೆಚ್ಚಾದ ಹಿನ್ನೆಲೆಯಲ್ಲಿ ರಾತ್ರಿಯೇ ಮಣಿಪಾಲ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಅವರ ಆರೋಗ್ಯ ಸ್ಥಿತಿ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. 90 ವರ್ಷ ವಯಸ್ಸಿನ ಎಸ್​.ಎಂ.ಕೃಷ್ಣ ಸಕ್ರಿಯ ರಾಜಕಾರಣದಿಂದ ದೂರವೇ ಉಳಿದಿದ್ದಾರೆ. ಮೊದಲು ಕಾಂಗ್ರೆಸ್​ನಲ್ಲಿದ್ದು ಕೇಂದ್ರ ಸಚಿವರು, ಕರ್ನಾಟಕ ಮುಖ್ಯಮಂತ್ರಿಯಾಗಿದ್ದ ಎಸ್​.ಎಂ.ಕೃಷ್ಣ, ನಂತರ ಪಕ್ಷ ತನ್ನನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿ 2017ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇತ್ತೀಚೆಗೆ ನಾಡಪ್ರಭು ಕೆಂಪೇಗೌಡ ಅವರ ಹೆಸರಿನಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಿರುವ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...