ಸೋನಿಯಾ ಗಾಂಧಿ ಅವರಿಗೆ ಜೂನ್ 1ರಂದು ಕೊರೋನಾ ಪಾಸಿಟಿವ್ ಬಂದಿತ್ತು . ಹೀಗಾಗಿ ಜೂನ್ 12ರಂದು ಸೋನಿಯಾ ಗಾಂಧಿ ನವದೆಹಲಿಯ ಗಂಗಾರಾಮ್ ಆಸ್ತ್ರೆಗೆ ದಾಖಲಾಗಿದ್ದರು. ನಂತರ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆರೋಗ್ಯ ಸಮಸ್ಯೆ ಹೆಚ್ಚಾದ ಹಿನ್ನೆಲೆ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ .
ಆಸ್ಪತ್ರೆ ವೈದ್ಯಾಧಿಕಾರಿಗಳ ಮಾಹಿತಿ ಪ್ರಕಾರ ಅವರ ಮೂಗಿನಲ್ಲಿ ರಕ್ತ ಬರುತ್ತಿತ್ತು, ಈ ಹಿನ್ನೆಲೆ ಅವರಿಗೆ ಆಪರೇಷನ್ ಕೂಡ ಮಾಡಲಾಗಿದೆ. ಜೂನ್ 23ರಂದು ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿಯವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಮತ್ತು ಸೋನಿಯಾ ಇಬ್ಬರಿಗೂ ಇ.ಡಿ. ಸಮನ್ಸ್ ಜಾರಿ ಮಾಡಿತ್ತು. ಆದರೆ ಸೋನಿಯಾ ಗಾಂಧಿಯವರಿಗೆ ಕೊರೋನಾ ಬಂದ ಕಾರಣ ರಾಹುಲ್ ಗಾಂಧಿ ಮಾತ್ರ ಹಾಜರಾಗಿದ್ದರು. ಮೂರು ದಿನಗಳ ಕಾಲ ಜಾರಿ ನಿರ್ದೇಶನಾಲಯ ರಾಹುಲ್ ಗಾಂಧಿ ಅವರ ವಿಚಾರಣೆ ನಡೆಸಿದೆ.