ಖ್ಯಾತ ಗಾಯಕ ಸೋನು ನಿಗಮ್ ಮತ್ತು ಮಹಾರಾಷ್ಟ್ರದ ಇಬ್ಬರು ಬಿಜೆಪಿ ಶಾಸಕರ ಕೊಲೆಗೆ ಸಂಚು ನಡೆಸುತ್ತಿದೆ ಎಂಬ ಆತಂಕಕಾರಿ ಮಾಹಿತಿ ಹೊರ ಬಿದ್ದಿದೆ.
ಈ ಬಗ್ಗೆ ಗುಪ್ತಚರ ಇಲಾಖೆ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದೆ. ಗಾಯಕ ಸೋನು ನಿಗಮ್ ಹಾಗೂ ಬಿಜೆಪಿ ಶಾಸಕರಾದ ರಾಮ್ ಕದಂ ಮತ್ತು ಆಶಿಶ್ ಶೆಲಾರ್ ಹತ್ಯೆಗೆ ಸಂಚು ರೂಪಿಸಿರುವ ಬಗ್ಗೆ ಗುಪ್ತಚರ ಇಲಾಖೆ ನೀಡಿದ ಮಾಹಿತಿ ಮೇರೆಗೆ ಹೆಚ್ಚಿನ ಭದ್ರತೆ ನೀಡಲಾಗಿರುವುದಾಗಿ ಮುಂಬೈ ಪೊಲೀಸರು ತಿಳಿಸಿದ್ದಾರೆ.
ಸೋನು ನಿಗಮ್ ಕಳೆದ ವರ್ಷ ಆಜಾನ್ ಗೆ ಆಕ್ಷೇಪ ವ್ಯಕ್ತಪಡಿಸಿ, ಈ ವಿಷಯವಾಗಿ ವಿವಾದಾತ್ಮಕ ಟ್ವೀಟ್ ಮಾಡಿದ್ದರು. ಇದಕ್ಕೆ ಮುಸ್ಲಿಂ ಸಮುದಾಯದಿಂದ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು.
ಪಾಕ್ ಮೂಲದ ಉಗ್ರ ಸಂಘಟನೆಗಳು ಸೋನು ನಿಗಮ್ ಅವರನ್ನು ಸಾರ್ವಜನಿಕ ಸ್ಥಳ ಅಥವಾ ಸಿನಿಮಾ ಪ್ರಚಾರದ ವೇಳೆಯಲ್ಲಿ ಗಾಯಕ ಸೋನು ನಿಗಮ್ ಮೇಲೆ ದಾಳಿ ಮಾಡಲು ಪ್ಲಾನ್ ಮಾಡಿವೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ.