No menu items!
13.4 C
Munich
Friday, September 11, 2026

ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ

Must read

ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಸ್ಪೀಕರ್ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಂಪ್ರದಾಯದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಜಿ.ಎಸ್. ಪಾಟೀಲ್ ಅವರನ್ನು ಸ್ಪೀಕರ್ ಪೀಠಕ್ಕೆ ಕರೆತಂದು ಕೂರಿಸಿದರು.
ಸ್ಪೀಕರ್ ಆಯ್ಕೆ ಪ್ರಕ್ರಿಯೆಗೂ ಮುನ್ನ ವಿಧಾನಸಭೆಯ ಹಂಗಾಮಿ ಸ್ಪೀಕರ್ ಜಯಚಂದ್ರ ಅವರು ರೂಲಿಂಗ್ ನೀಡಿದರು. ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಪೀಕರ್ ಸ್ಥಾನಕ್ಕೆ ಜಿ.ಎಸ್. ಪಾಟೀಲ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಈ ಪ್ರಸ್ತಾವನೆಯನ್ನು ಅನುಮೋದಿಸಿದರು.
ನಂತರ ಹಂಗಾಮಿ ಸ್ಪೀಕರ್ ಅವರು ಪ್ರಸ್ತಾವನೆಯನ್ನು ಮತಕ್ಕೆ ಹಾಕಿದರು. ಪ್ರಸ್ತಾವನೆ ಅಂಗೀಕಾರಗೊಂಡ ಬಳಿಕ ಜಿ.ಎಸ್. ಪಾಟೀಲ್ ಅವರು ವಿಧಾನಸಭೆಯ ನೂತನ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾದರು.
ಸ್ಪೀಕರ್ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಬಿಜೆಪಿ ಸದಸ್ಯರು ಸದನದೊಳಗೆ ಪ್ರವೇಶಿಸಿದರು.
‘ಅಧಿಕಾರ ದುರುಪಯೋಗ ಮಾಡಿಕೊಂಡು ತೊಂದರೆ ಕೊಡುವ ಉದ್ದೇಶವಿಲ್ಲ’
ಸ್ಪೀಕರ್ ಆಯ್ಕೆಗೂ ಮುನ್ನ ಸದನವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತಮ್ಮ ಮುಂದಿನ ಯೋಜನೆಗಳು ಹಾಗೂ ಚಿಂತನೆಗಳ ಬಗ್ಗೆ ಮುಂದೆ ಮಾತನಾಡುವುದಾಗಿ ಹೇಳಿದರು.
ಅಧಿಕಾರ ದುರುಪಯೋಗ ಮಾಡಿಕೊಂಡು ಯಾರಿಗೂ ತೊಂದರೆ ನೀಡುವ ಉದ್ದೇಶವಿಲ್ಲ. ಯಾರಿಗೆ ಎಷ್ಟು ಗೌರವ ನೀಡಬೇಕೋ ಅಷ್ಟು ಗೌರವ ನೀಡುತ್ತೇನೆ ಎಂದು ಹೇಳಿದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ತಾವು ಇದೇ ಸದನದಲ್ಲಿ ಅವರ ಪಕ್ಕದಲ್ಲಿ ಕುಳಿತಿದ್ದನ್ನು ನೆನಪಿಸಿಕೊಂಡ ಡಿಕೆಶಿ, ‘ಒನ್ ಮ್ಯಾನ್ ವಿತ್ ಕರೇಜ್ ಮೇಕ್ಸ್ ಮೇಜಾರಿಟಿ’ ಎಂಬ ಮಾತನ್ನು ಇದೇ ಸ್ಥಾನದಲ್ಲಿ ನಿಂತು ಹೇಳಿದ್ದೆ ಎಂದು ತಿಳಿಸಿದರು.
ನಮ್ಮ ಸಂಖ್ಯೆ 136 ಎಂದು ಹೇಳಿದ್ದೆ. ನಾವೆಲ್ಲರೂ ಒಂದಾಗಿ, ಒಗ್ಗಟ್ಟಿನಿಂದ ಇರುತ್ತೇವೆ. 2028ರ ಚುನಾವಣೆಯಲ್ಲಿ ಏನಾಗಬೇಕು ಎಂಬುದನ್ನು ಜನರು ತೀರ್ಮಾನಿಸುತ್ತಾರೆ ಎಂದು ಸಿಎಂ ಹೇಳಿದರು.

- Advertisement -spot_img

More articles

- Advertisement -spot_img

Latest article