ಬೆಂಗಳೂರು: ನಟ ದರ್ಶನ್ ಪ್ರಕರಣ ಸಂಬಂಧಿಸಿದಂತೆ ಎಸ್ಪಿಪಿ ಪ್ರಸನ್ನ ಕುಮಾರ್ ಬದಲಾವಣೆ ಇಲ್ಲ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಎಸ್ಪಿಪಿ ಬದಲಾವಣೆ ಮಾಡೊ ಬಗ್ಗೆ ನನ್ನ ಮೇಲೆ ಒತ್ತಡ ಇದೆ ಅಂತ ಟಿವಿಗಳಲ್ಲಿ ಬರ್ತಾಯಿದೆ. ನನ್ನ ಮೇಲೆ ಯಾವುದೇ ಒತ್ತಡವಿಲ್ಲ, SPP ಬದಲಾವಣೆಯ ಪ್ರಸ್ತಾಪವೇ ಇಲ್ಲ ಎಂದು ಹೇಳಿದರು. SPP ಬದಲಾವಣೆ ಮಾಡಿ ಎಂದು ಯಾರು ನನ್ನ ಭೇಟಿ ಮಾಡಿ ಒತ್ತಡ ಹಾಕಿಲ್ಲ,
ತನಿಖೆಗೆ ಮುಕ್ತ ಸ್ವತಂತ್ರ ಕೊಡಲಾಗಿದೆ. ನನ್ನ ಮೇಲೆ ಯಾರು ಒತ್ತಡ ಹಾಕಿಲ್ಲ. ಒತ್ತಡ ಹಾಕಿದ್ರು ನಾನು ಕೇಳೊಲ್ಲ. ಸಚಿವರು ಒತ್ತಡ ಹಾಕ್ತಿದ್ದಾರೆ ಅನ್ನೋದೆಲ್ಲ ಸತ್ಯ ಅಲ್ಲ. ಪೊಲೀಸರು ತನಿಖೆ ಮಾಡ್ತಿದ್ದಾರೆ, ಅವರಿಗೆ ಮುಕ್ತ ಸ್ವಾತಂತ್ರ್ಯ ಕೊಡಲಾಗಿದೆ. SPP ಬದಲಾವಣೆ ಮಾಡ್ತಾರೆ ಅಂತ ಟಿವಿಗಳಲ್ಲಿ ಮಾಧ್ಯಮಗಳಲ್ಲಿ ಮತ್ತು ಒತ್ತಡ ಹಾಕ್ತಿದ್ದಾರೆ ಅಂತ ಹೇಳ್ತಿರೋದೆಲ್ಲ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
SPP ಬದಲಾವಣೆ ಪ್ರಸ್ತಾವನೆ ನನ್ನ ಮುಂದೆ ಬಂದಿಲ್ಲ: ಸಿಎಂ ಸಿದ್ದರಾಮಯ್ಯ
Date: