ಸಂಸದ ಸ್ಥಾನದ ಅವಧಿ ಮುಗಿಯುತ್ತಿದ್ದಂತೆ ರಾಜಕೀಯ ನಿವೃತ್ತಿಯಾಗ್ತೇನೆ ಎಂದು ಹಿರಿಯ ರಾಜಕೀಯ ಮುತ್ಸದ್ದಿ, ಸಂಸದ ಶ್ರೀನಿವಾಸ್ ಪ್ರಸಾದ್ ಘೋಷಣೆ ಮಾಡಿದ್ದಾರೆ. ಮೈಸೂರು ನಗರದ ಕಲಾಮಂದಿರದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಈ ಬಗ್ಗೆ ಮಾತನಾಡಿದ ಅವರು, ನನ್ನ ಆರೋಗ್ಯ ಸರಿಯಿಲ್ಲದ ಕಾರಣ ಹೆಚ್ಚು ಸಮಯ ನಿಲ್ಲಲು ಆಗುವುದಿಲ್ಲ. ಹಾಗಾಗಿ ಕೂತು ಮಾತಾಡ್ತಿದ್ದೇನೆ, ನನ್ನ ರಾಜಕೀಯ ಜೀವನಕ್ಕೆ 50 ವರ್ಷ ಆಗ್ತಿದೆ. ಒಂದೂವರೆ ವರ್ಷಕ್ಕೆ ಸಂಸದ ಅವಧಿ ಮುಗಿಯುತ್ತೆ, ಆಗ ನಾನು ನಿವೃತ್ತಿಯಾಗ್ತೇನೆ. ನಾನು 14 ಚುನಾವಣೆಯಲ್ಲಿ ಸ್ಪರ್ಧಿಸಿದ್ದು, 11ರಲ್ಲಿ ಗೆಲುವು ಸಾಧಿಸಿದ್ದೇನೆ. ಸಂಸತ್ತು ಜಗತ್ತಿನ ಪ್ರಜಾಪ್ರಭುತ್ವದ ಬಹು ದೊಡ್ಡ ಕೇಂದ್ರವಾಗಿದೆ, ಸ್ಥಾಯಿ ಸಮಿತಿಗಳ ಮೂಲಕ ದೇಶದ ಪ್ರವಾಸ ಮಾಡಿದ್ದೇನೆ. ಅಂಬೇಡ್ಕರ್ರ ವಿಚಾರಧಾರೆಗಳನ್ನು ಮನವರಿಕೆ ಮಾಡಿಕೊಂಡಿದ್ದೇನೆ, ಅಸ್ಪೃಶ್ಯತೆಯ ಹಿಂಸೆ ಕೇಳಿದರೆ ಬೇರೆಯವರಿಗೆ ರಕ್ತ ಕುದಿಯುತ್ತದೆ. ಇನ್ನು ಆ ಹಿಂಸೆಯನ್ನು ಅನುಭವಿಸುವವರ ಕಥೆ ಏನಾಗಬೇಡ. ಜಗತ್ತು ಹುಚ್ಚರ ಸಂತೆಯಾಗಿದೆ, ಆದರೂ ಹೇಗೋ ಬದುಕುತ್ತಿದ್ದೇವೆ ಎಂದು ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
ರಾಜಕೀಯ ನಿವೃತ್ತಿಯಾಗ್ತೇನೆ: ಶ್ರೀನಿವಾಸ ಪ್ರಸಾದ್
Date: