SSLC ಪರೀಕ್ಷೆ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ !

0
30

ಬೆಂಗಳೂರು: ರಾಜ್ಯದಲ್ಲಿ ವಿದ್ಯಾರ್ಥಿಗಳು ಬಹು ದಿನಗಳಿಂದ ಕಾಯುತ್ತಿದ್ದ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಕೂಡ ಬಾಲಕಿಯರೇ ಮೇಲೂಗೈ ಸಾಧಿಸಿದ್ದಾರೆ. ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಬಂದಿದೆ.
ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಬಂದಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪರವರ ತವರು ಜಿಲ್ಲೆ ಶಿವಮೊಗ್ಗ 3ನೇ ಸ್ಥಾನ ಪಡೆದಿದೆ. ಈ ಬಾರಿ 8.59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6,31,204 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಫಲಿತಾಂಶವನ್ನು ಪ್ರಕಟಿಸಿದೆ. ಅಂದ ಹಾಗೆಯೇ ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ-1ನ್ನು ದಿನಾಂಕ 25.03.2024 ರಿಂದ 06.04.2024 ರವರೆಗೆ ಬರೆದಿದ್ದಾರೆ. 4,41,910 ಬಾಲಕರು ಮತ್ತು 4,28,058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದಾರೆ.
2,87,416 (65.90%) ಬಾಲಕರು ಪಾಸ್ ಆಗಿದ್ದು 3,43,788 (81.11%) ಬಾಲಕಿಯರು ಪಾಸ್ ಆಗಿದ್ದಾರೆ. ಈ ಮೂಲಕ SSLC ಪರೀಕ್ಷೆಯಲ್ಲಿ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಇನ್ನು ಉಡುಪಿ ಪ್ರಥಮ ಸ್ಥಾನ(94%) ಪಡೆದಿದೆ. ದ್ವಿತೀಯ ಸ್ಥಾನ ದಕ್ಷಿಣ ಕನ್ನಡ(92.12%) ಜಿಲ್ಲೆಗೆ ಸಿಕ್ಕಿದ್ದು ಶಿವಮೊಗ್ಗ (88.67%) ಮೂರನೇ ಸ್ಥಾನ ಪಡೆದಿದೆ. ಇನ್ನು ರಾಜ್ಯದಲ್ಲಿ ಶೇಕಡಾವಾರು ಕೊನೆ ಸ್ಥಾನ ಪಡೆದ ಜಿಲೆ ಯಾದಗಿರಿ (50.59%).