SSLC ಪಾಸಾದ ವಿದ್ಯಾರ್ಥಿನಿ ತಲೆ ಕಡಿದು ಕೊಲೆ ಮಾಡಿದ್ದ ಆರೋಪಿ ಅಂದರ್ !

Date:

ಮಡಿಕೇರಿ:- SSLC ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿ ತಲೆ ಕಡಿದು ಹತ್ಯೆ ಮಾಡಿದ್ದ ಆರೋಪಿಯನ್ನು ಅರೆಸ್ಟ್ ಮಾಡಿರುವ ಘಟನೆ ಜರುಗಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಘಟನೆ ಜರುಗಿದೆ.

ಮೇ 09ರಂದು ಆರೋಪಿ ಬಾಲಕಿಯ ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದ. ಪೊಲೀಸರು ಹಲವು ತಂಡಗಳನ್ನು ಮಾಡಿ ಶೋಧ ಕಾರ್ಯ ನಡೆಸುತ್ತಿದ್ದರು. ಸದ್ಯ ಸೋಮವಾರಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ಅಡಗಿದ್ದ ಆರೋಪಿ ಪ್ರಕಾಶ್​ನನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಾಗುತ್ತಿದೆ.

ಒಂದು ಕಡೆ ಮೀನಾ ಮೇ.09ರಂದು ಎಸ್​ಎಸ್​ಎಲ್​ಸಿ ಪಾಸ್​ ಆದ ಖುಷಿಯಲ್ಲಿದ್ದಳು. ಮತ್ತೊಂದು ಕಡೆ ಅವತ್ತೇ ಆಕೆಯ ಪ್ರಿಯಕರನ ಜೊತೆ ಎಂಗೇಜ್ಮೆಂಟ್ ಕೂಡ ಆಗಿತ್ತು. ಆದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮನೆಗೆ ಭೇಟಿ ನೀಡಿ 18 ವರ್ಷ ತುಂಬುವ ವರೆಗೆ ಮೀನಾಳಿಗೆ ಮದುವೆ ಮಾಡದಂತೆ ಪೋಷಕರ ಬಳಿ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ. ಈ ವಿಚಾರಣೆ ಜಗಳ ಶುರು ಮಾಡಿದ್ದ ಮೀನಾಳ ಪ್ರಿಯಕರ ಮಚ್ಚು ತಂದು ಮೀನಾಳ ಕತ್ತು ಕತ್ತರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...