SSLC ವಿದ್ಯಾರ್ಥಿಗಳಿಗೆ ಸಿಹಿಸುದ್ದಿ

Date:

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ನಡೆಯುವ ಎರಡೂ ದಿನವೂ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ.
ಇದೇ ಜುಲೈ 19 ಹಾಗೂ 22 ರಂದು ಎರಡು ದಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಕುರಿತು ಕೆಎಸ್​ಆರ್​ಟಿಸಿ ಎಂಡಿ ಶಿವಯೋಗಿ ಕಳಸದ್​ ಆದೇಶ ಹೊರಡಿಸಿದ್ದು, ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ಜುಲೈ 19 ಹಾಗೂ ಜುಲೈ 22ರಂದು ತಾವು ವಾಸಿಸುವ ಪ್ರದೇಶದಿಂದ ಪರೀಕ್ಷಾ ಕೇಂದ್ರದ ವರೆಗೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣ ಬೆಳೆಸಬಹುದಾಗಿದೆ.


ಪರೀಕ್ಷಾ ಪ್ರಮಾಣ ಪತ್ರ ತೋರಿಸಿದರೆ ಸಾಕು ಯಾವುದೇ ರೀತಿಯ ಶುಲ್ಕ ತೆರಬೇಕಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಸಾಮಾನ್ಯ ಹಾಗೂ ವೇಗಧೂತ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಪರೀಕ್ಷೆ ಮುಗಿಸಿ ವಾಪಸ್ ಮನೆಗೆ ಬರುವಾಗಲೂ ಇದು ಅನ್ವಯವಾಗಲಿದೆ.
ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹಾಗೂ ಪರೀಕ್ಷಾ ಕೇಂದ್ರದಿಂದ ಮರಳಿ ಮನೆಗೆ ಬರುವಾಗ ಪರೀಕ್ಷಾ ಪ್ರಮಾಣ ಪತ್ರ ತೋರಿಸಿ ಉಚಿತ ಪ್ರಯಾಣ ಸೌಲಭ್ಯವನ್ನು ಪಡೆಯಬಹುದಾಗಿದೆ.

ಈ ಸಂದರ್ಭದಲ್ಲಿ ಎಲ್ಲಾ ರೀತಿಯಲ್ಲೂ ಕೊರೊನಾ ನಿಯಮಾವಳಿಗಳನ್ನು ಪಾಲಿಸುವುದು ಅಗತ್ಯವಾಗಿದೆ. ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಉಚಿತ ಪ್ರಯಾಣ ಮಾಡಬಹುದಾಗಿದ್ದು, ಪರೀಕ್ಷಾ ಪ್ರಮಾಣ ಪತ್ರ ತೋರಿಸುವ ಮೂಲಕ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ರಾಜ್ಯಾದ್ಯಂತ ಎಲ್ಲಾ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೂ ಇದು ಅನ್ವಯವಾಗಲಿದ್ದು, ಪರೀಕ್ಷಾ ಕೇಂದ್ರದವರೆಗೆ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದಾಗಿದೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...