No menu items!
10.4 C
Munich
Thursday, April 23, 2026

SSLC ಫಲಿತಾಂಶ ಪ್ರಕಟ: ಶೇ.90ರಷ್ಟು ಫಲಿತಾಂಶ ದಾಖಲು! ಬಾಲಕಿಯರೇ ಮೇಲುಗೈ

Must read

SSLC ಫಲಿತಾಂಶ ಪ್ರಕಟ: ಶೇ.90ರಷ್ಟು ಫಲಿತಾಂಶ ದಾಖಲು! ಬಾಲಕಿಯರೇ ಮೇಲುಗೈ

ಬೆಂಗಳೂರು: 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ಈ ಬಾರಿ ಶೇ.94.1ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ.

ಈ ಬಾರಿ ಮೂವರು ಸೇರಿ ಹಲವರು 625ರಲ್ಲಿ 625 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ದಾವಣಗೆರೆಯ ಭರತ್, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ ಹಾಗೂ ರಾಯಚೂರಿನ ಸುಖದೇವ್ ಸಂಪೂರ್ಣ ಅಂಕಗಳನ್ನು ಗಳಿಸಿದ್ದಾರೆ.

ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇ.98.40ರೊಂದಿಗೆ ಮೊದಲ ಸ್ಥಾನ ಪಡೆದುಕೊಂಡಿದೆ. ಉಡುಪಿ ಜಿಲ್ಲೆ ಶೇ.98.18ರೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಉತ್ತರ ಕನ್ನಡ ಶೇ.98.09ರೊಂದಿಗೆ ಮೂರನೇ ಸ್ಥಾನದಲ್ಲಿದೆ. ಹಾಸನ ಜಿಲ್ಲೆ ಶೇ.97.51 ಫಲಿತಾಂಶದೊಂದಿಗೆ ನಾಲ್ಕನೇ ಸ್ಥಾನ ಪಡೆದಿದೆ.

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು Karnataka Results Portal ಮೂಲಕ ವೀಕ್ಷಿಸಬಹುದು. ಜೊತೆಗೆ Karnataka One ಮೊಬೈಲ್ ಆಪ್‌ನಲ್ಲಿಯೂ ಫಲಿತಾಂಶ ಲಭ್ಯವಿದೆ. ಇದರೊಂದಿಗೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಅಥವಾ ವಾಟ್ಸಾಪ್ ಮೂಲಕ ಫಲಿತಾಂಶದ ವಿವರಗಳನ್ನು ಕಳುಹಿಸಲಾಗುತ್ತಿದೆ.

- Advertisement -spot_img

More articles

- Advertisement -spot_img

Latest article