No menu items!
16 C
Munich
Saturday, October 3, 2026

ಬಿಜೆಪಿಯವರು ಪಕ್ಷಕ್ಕೆ ಸೇರಿಸಿಕೊಳ್ಳುವಾಗ ಜಾಮೂನು ನೀಡುತ್ತಾರೆ !

Must read

ಮೈಸೂರು: ಬಿಜೆಪಿಯವರು ಪಕ್ಷಕ್ಕೆ ಸೇರಿಸಿಕೊಳ್ಳುವಾಗ ಜಾಮೂನು ನೀಡುತ್ತಾರೆ. ಅಧಿಕಾರ ಮುಗಿದ ಮೇಲೆ ವಿಷ ಕೊಡುತ್ತಾರೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎಸ್ʼಟಿ ಸೋಮಶೇಖರ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷದಲ್ಲಿದ್ದವನು. ಅವರಾಗಿಯೇ ಬಿಜೆಪಿಗೆ ಸೇರಿಸಿಕೊಂಡರು.ಈಗ ಎಸ್ ಟಿ ಸೋಮಶೇಖರ್ ಹೋದರೆ ಹೋಗಲಿ ಎಂದು ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು. ನನ್ನನ್ನು ಪಕ್ಷ ಬಿಡಿಸಲು ರೆಡಿಯಾಗಿದ್ದಾರೆ.
ನಾನು ಕ್ಷೇತ್ರದ ಅನುಕೂಲಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ನನ್ನ ಕ್ಷೇತ್ರದ ಅಭಿವೃದ್ಧಿಗೆ ಸಿಎಂ, ಡಿಸಿಎಂ ಹತ್ತಿರ ಹೋಗುತ್ತೇನೆ. ಇದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದರು. ನಾನು ಸಿಎಂ, ಡಿಸಿಎಂ ಹೊಗಳುವುದನ್ನು ಸಹಿಸುತ್ತಿಲ್ಲ. ನನ್ನ ಕಚೇರಿಯಿಂದ ಕಾಂಗ್ರೆಸ್ ಗ್ಯಾರಂಟಿ ಫಾಲೋ ಅಪ್ ಮಾಡಿದ್ದೇನೆ. ಇದರಿಂದ ನನ್ನ ಕ್ಷೇತ್ರದ ಜನರಿಗೆ ಅನುಕೂಲವಾಗಿದೆ ಎಂದರು.

- Advertisement -spot_img

More articles

- Advertisement -spot_img

Latest article